Advertisement
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಸುದೀರ್ಘ ಚರ್ಚೆ ನಡೆಸಿ ರಾಜ್ಯಕ್ಕಾಗುತ್ತಿರುವ ಅನ್ಯಾಯ ಪುನರಾವರ್ತನೆ ಆಗದಿರಲು ಹಲವು ಸೂಚನೆಗಳನ್ನು ನೀಡಲಾಯಿತು.
Related Articles
ಸಾಫ್ಟ್ವೇರ್ ವಲಯದಲ್ಲಿ ಬರುವ ದೇಶದ ಒಟ್ಟಾರೆ ತೆರಿಗೆ ಪೈಕಿ ಶೇ. 42ರಷ್ಟು ಬೆಂಗಳೂರಿನಿಂದಲೇ ಪಾವತಿಯಾಗುತ್ತಿದೆ. ಆದರೆ, ಅದರಲ್ಲಿ ಬರುವ ಪಾಲು ಅತ್ಯಲ್ಪ. ಇದರಿಂದ ಬೆಂಗಳೂರಿನ ನಿರೀಕ್ಷಿತ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದವರು ಹೇಳಿದರು.
Advertisement
29ಕ್ಕೆ ಹಣಕಾಸು ಆಯೋಗದ ಸಭೆ?16ನೇ ಹಣಕಾಸು ಆಯೋಗಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆ. 29ಕ್ಕೆ ಸಭೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಅಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಬೇಕಾದ, ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಬಹುದಾದ ಮಾನ ದಂಡಗಳ ವರದಿ ಪಡೆಯುವ ಸಂಬಂಧ ಈ ಪೂರ್ವಭಾವಿ ಸಭೆನಡೆಸಲಾಗಿದೆ. ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಫಾಕ್ಸ್‌ಕಾನ್‌ಗೆ ಅಗತ್ಯ ನೆರವು: ಸಿಎಂ ಭರವಸೆ
ಬೆಂಗಳೂರು: ಆ್ಯಪಲ್ ಫೋನ್ ಸೇರಿ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪೆನಿಗಳಲ್ಲಿ ಒಂದಾಗಿರುವ ಫಾಕ್‌ಕಾನ್‌ನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಂಗ್ ಲಿಯು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಖಾಸಗಿ ಹೊಟೇಲ್‌ನಲ್ಲಿ ಭೇಟಿಯಾಗಿ ಸಮಾಲೋಚಿಸಿದರು. ಫಾಕ್ಸ್‌ಕಾನ್ ಮತ್ತು ರಾಜ್ಯದ ನಡುವಿನ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸಲು ನಾವು ಬದ್ಧರಾಗಿದ್ದೇವೆ. ರಾಜ್ಯದಲ್ಲಿನ ಫಾಕ್ಸ್‌ಕಾನ್ ಯೋಜನೆಗೆಗಳಿಗೆ ಅಗತ್ಯವಾದ ಎಲ್ಲ ರೀತಿಯ ಸಹಕಾರ ಮತ್ತು ನೆರವು ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಇದಕ್ಕೂ ಮೊದಲು ಯಂಗ್ ಲಿ ಯು ಅವರನ್ನು ಸರಕಾರದ ಪರವಾಗಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರಮಾಡಿಕೊಂಡರು.