Advertisement
ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.
ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ತಮ್ಮ ಕಾರ್ಡ್ ಗಳನ್ನು ಹಿಂದಿರುಗಿಸಲು ಕಾಲಾವಕಾಶ ನೀಡಬೇಕು. ಬಳಿಕ ಅಂಥವರಿಗೆ ನೋಟಿಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ ಸಿಎಂ, ಈ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಬಾರದು ಎಂದೂ ಸ್ಪಷ್ಟವಾಗಿ ಹೇಳಿದರು.
ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4,692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3,253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4.44 ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯುತ್ತಿ¨ªಾರೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.
Related Articles
ರಾಜ್ಯದಲ್ಲಿ 4,518 ಪೆಟ್ರೋಲ್ ಬಂಕ್‌ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದರು.
Advertisement
ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.