Advertisement

CM Siddaramaiah: “ಒಂದು ದೇಶ ಒಂದು ಚುನಾವಣೆ’ ವಿರುದ್ಧ ಗೊತ್ತುವಳಿ ಅಂಗೀಕಾರ

01:07 AM Dec 13, 2024 | Team Udayavani |

ಬೆಂಗಳೂರು: ಲೋಕಸಭೆ, ವಿಧಾನಸಭೆ ಮತ್ತುಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ “ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ “ಎಕ್ಸ್‌’ನಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.

Advertisement

ಈ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ರಾಜ್ಯಗಳ ಹಕ್ಕು ಮೊಟಕುಗೊಳಿಸುವ ದುರಾಲೋಚನೆ ಕೂಡ ಇದೆ. ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣೆ ವ್ಯವಸ್ಥೆ ಸುಧಾರಣೆಗೊಳಪಡಿಸುವ ತುರ್ತು ಅಗತ್ಯ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ ಎಂದು ಟೀಕಿಸಿದ್ದಾರೆ.

ಕೇರಳ ಸರಕಾರ ಈಗಾಗಲೇ “ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವ ವಿರೋಧಿಸಿ ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಸಲ್ಲಿಸಿದೆ. ಅಗತ್ಯ ಬಿದ್ದರೆ ನಮ್ಮ ಸರಕಾರ ಕೂಡ ಈ ಮಸೂದೆ ವಿರುದ್ಧ ಬಹುಮತದ ಗೊತ್ತುವಳಿ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ ಎಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next