Advertisement
ರಾಜ್ಯದ ಅನ್ನ ಭಾಗ್ಯ ಅಕ್ಕಿ ಕುರಿತು ತೀವ್ರ ಗದ್ದಲದ ನಡುವೆಯೇ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಲಿದ್ದಾರೆ. ಮೇ 20 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿಗೆ ಮೊದಲ ಭೇಟಿ ನೀಡಿದ್ದಾರೆ.
Related Articles
Advertisement
ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಿರುವ ಬಗ್ಗೆ ನೀತಿ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಅಂತರ ಸಚಿವಾಲಯಗಳ ಸಭೆ ನಡೆದಿದೆ ಹಾಗೂ ಮಾಹಿತಿಯ ಕೊರತೆಯಿಂದ ಪತ್ರ ಬರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಎಫ್.ಸಿ.ಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು.
ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಿದ್ದರಾಮಯ್ಯ ಅವರೊಂದಿಗೆ ದೆಹಲಿಯಲ್ಲಿದ್ದಾರೆ.