Advertisement

College ದಿನಗಳ ಪ್ರೇಮ ಕಹಾನಿ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ !

09:13 PM May 23, 2024 | Team Udayavani |

ಮೈಸೂರು: ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಆದರೆ ಸಾಧ್ಯವಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಕಾಲೇಜು ದಿನಗಳ ಪ್ರೇಮ ಕಹಾನಿ ನೆನಪಿಸಿಕೊಂಡಿದ್ದಾರೆ.

Advertisement

ಜನ ಸ್ಪಂದನ ಟ್ರಸ್ಟ್ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ”ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ.ನಮ್ಮ ಸರಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ.ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ” ಎಂದರು.

”ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು.ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ.ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ.ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು’ ಎಂದು ತಾವೂ ಲವ್ ಮಾಡಿದ್ದ ವಿಚಾರವನ್ನು ಬಹಿರಂಗವಾಗಿ ಹೇಳಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next