Advertisement

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

01:21 PM Sep 20, 2024 | Team Udayavani |

ಮೈಸೂರು: ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಲಾಟೆಗಳು ನಡೆಯುತ್ತಿದೆ. ಬಿಜೆಪಿಯವರು ಕೋಮುವಾದಿಗಳು. ಅವರು ನೀಡುವ ಹೇಳಿಕೆಯಿಂದ ಗಲಾಟೆಗಳು ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಬಿಜೆಪಿ ವಿರುದ್ದ ಗಂಭೀರ ಆರೋಪ ಮಾಡಿದರು.

Advertisement

ಮೈಸೂರಿನಲ್ಲಿ (Mysuru) ಶುಕ್ರವಾರ (ಸೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಗಣೇಶ ಮೂರ್ತಿ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪ್ರತಿ‌ನಿತ್ಯ ಗಲಾಟೆ ನಡೆಯುತ್ತಿಲ್ಲ. ಇದುವರೆಗೆ ಎರಡು ಪ್ರಕರಣ ನಡೆದಿವೆ. ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದೇನೆ. ನಾಗಮಂಗಲ ಪ್ರಕರಣದಲ್ಲಿ ಡಿವೈಎಸ್ಪಿ, ಇನ್ಸ್ಪೆಕ್ಟರ್ ಅಮಾನತು ಮಾಡಿದ್ದೇವೆ ಎಂದರು.

ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಡಿನೋಟಿಫಿಕೇಷನ್ ಆರೋಪ ವಿಚಾರಕ್ಕೆ ಮಾತನಾಡಿ, ದಾಖಲೆಗಳನ್ನು ಗುರುವಾರ ಸಚಿವರು ಬಿಡುಗಡೆ ಮಾಡಿದ್ದಾರೆ. ನಾನು ಆ ದಾಖಲೆಗಳನ್ನು ನೋಡುತ್ತೇನೆ. ಆ ಭೂಮಿಯನ್ನು ಕುಮಾರಸ್ವಾಮಿ ಬಾಮೈದನ ಹೆಸರಿನಲ್ಲಿ ರಿಜಿಸ್ಟರ್ ಆಗಿದೆ. ಅತ್ತೆಗೆ ಹಲವರು ಜಿಪಿಎ ಮಾಡಿಕೊಟ್ಟಿದ್ದಾರೆ. ಇದು ಬಹಳ ಗಂಭೀರವಾದ ಪ್ರಕರಣ. ದಾಖಲೆ ತರಿಸಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

ಕುಮಾರಸ್ವಾಮಿ ಯಾವಗಲೂ ಹಿಟ್ ಅಂಡ್ ರನ್ ಕೇಸ್. ತಮ್ಮ ಮೇಲಿನ ಎಲ್ಲಾ ಆರೋಪಕ್ಕೆ ಕೂಡ ಹಿಟ್ ಅಂಡ್ ರನ್ ರೀತಿ ಮಾತನಾಡಿ ಹೋಗುತ್ತಾರೆ ಎಂದು ಸಿಎಂ ಟೀಕೆ ಮಾಡಿದರು.

ಶಾಸಕ ಮುನಿರತ್ನ ವಿರುದ್ಧ ಎಸ್ಐಟಿ ತನಿಖೆ ಮಾಡಲು ಸಚಿವರು, ಶಾಸಕರು ಪತ್ರ ಕೊಟ್ಟಿದ್ದಾರೆ. ಪತ್ರದ ಮೇಲೆ ಮುಂದಿನ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಅವರ ಮೇಲೆ ಬಹಳಷ್ಟು ಗಂಭೀರ ಪ್ರಕರಣಗಳಿದೆ. ಹೀಗಾಗಿ ವಿಶೇಷ ತನಿಖಾ ತಂಡದ ಅಗತ್ಯವಿದೆ ಎಂದು ಕೇಳಿದ್ದಾರೆ. ಈ ಬಗ್ಗೆ ಗೃಹ ಸಚಿವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next