Advertisement

Koppala; ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಾಳುತ್ತಿದೆ: ಸಿಎಂ ಸಿದ್ದರಾಮಯ್ಯ

02:58 PM Nov 02, 2023 | Team Udayavani |

ಕೊಪ್ಪಳ: ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಾಳುತ್ತಿದೆ. ರಾಜ್ಯ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ದಿಂದ ಹಣ ಬಿಡುಗಡೆ ಮಾಡಿಸಲಿ. ನಮ್ಮ ಸಚಿವರು ಕೇಂದ್ರದ ಸಚಿವರನ್ನು ಭೇಟಿ ಮಾಡಲು ಹೋದರೂ ಅವರ ಭೇಟಿಗೆ ಅವಕಾಶ ಕೊಡುತ್ತಿಲ್ಲ. ನಮಗೆ ಕೇಂದ್ರದಿಂದ 600 ಕೋಟಿ ನರೇಗಾ ಯೋಜನೆ ಹಣ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಗ್ಗೆ ಕೇಂದ್ರ ಮಲತಾಯಿ ಧೋರಣೆ ತಾಳುತ್ತಿದೆ. ಒಂದು ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಹಣ ಕೇಳಿದ್ದೇವೆ. ಇನ್ನೂ ಹಣ ಬಿಡುಗಡೆ ಮಾಡಿಲ್ಲ ಎಂದರು.

ಸುರ್ಜೆವಾಲ ಹಾಗೂ ವೇಣುಗೋಪಾಲ ಲೋಕಸಭಾ ಚುನಾವಣೆಯ ಚರ್ಚೆ ಹಾಗೂ ಮುಂಬರುವ ದಿನಗಳಲ್ಲಿ ಶಾಸಕರುಗಳನ್ನು ನಿಗಮ ಮಂಡಳಿಗೆ ನೇಮಕ ಮಾಡಲು ಚರ್ಚೆಗೆ ಬಂದಿದ್ದರು. ಜಿಲ್ಲೆಯ ಬರ ನಿರ್ವಹಣೆಯಲ್ಲಿ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ ಎಂದರು.

ಪ್ರಧಾನಿಗಳು ಬರ ಕುರಿತು ಚರ್ಚೆಗೆ ಅವಕಾಶವನ್ನೇ ಕೊಡುತ್ತಿಲ್ಲ. ರಾಜ್ಯದ ಬಿಜೆಪಿಯ ಸಂಸದರು ಏನು ಮಾಡುತ್ತಿದ್ದಾರೆ. ಬಿಜೆಪಿ ಈಗ ಬರ ಅಧ್ಯಯನ ಮಾಡಲು ಹೊರಟಿದೆ. ಮೊದಲು ಕೇಂದ್ರ ಬಳಿ ಹೋಗಿ ಅನುದಾನ ಕೊಡಲು ಹೇಳಲಿ. ಮೋದಿ ಅವರು ತಮ್ಮ ಶಾಸಕ, ಸಚಿವರನ್ನೇ ಭೇಟಿಯಾಗಲ್ಲ. ಇನ್ನು ನಮ್ಮನ್ನು ಏನು ಭೇಟಿಗೆ ಅವಕಾಶ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಧ್ಯೆ ರಾಜ್ಯದ ಭ್ರಷ್ಟಾಚಾರ ಅನಾವರಣ ಎಂಬ ಬಿಎಸ್ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದೆಲ್ಲ ಶುದ್ದ ಸುಳ್ಳು.  ಬಿಜೆಪಿಯವರು ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಮನೆಗೆ ಕಳಿಸಿದರು. ಈಗ ಅವರು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

Advertisement

ಯತ್ನಾಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪಾಪ ಯತ್ನಾಳ ಕನಸು ಕಾಣುತ್ತಿದ್ದಾರೆ. ಯತ್ನಾಳ ಹಗಲು ವೇಳೆಯಲೇ ಕನಸು ಕಾಣುತ್ತಿದ್ದಾರೆ ಎಂದರು.

ರೈತರ ಪಂಪಸೆಟ್ ಬೋರವೆಲ್ ಗಳ ಮೂಲ ಸೌಕರ್ಯಕ್ಕೆ ನೀಡುತ್ತಿದ್ದ ಅನುದಾನ ಹಿಂದಿನಂತೆ ಮುಂದುವರೆಸಲಾಗುವುದು ಎಂದರು.

ಕಾಂಗ್ರೆಸ್ ಶಾಸಕರ ದುಬೈ ಪ್ರವಾಸ ವಿಚಾರಕ್ಕೆ ಮಾತನಾಡಿದ ಅವರು, ಶಾಸಕರು ತಮ್ಮ ಹಣದಲ್ಲಿ ಪ್ರವಾಸ ಮಾಡಿದರೆ ಏನು ಕಷ್ಟ. ಸರ್ಕಾರದಿಂದ ನಾವು ಅವರನ್ನು ಕಳಿಸುತ್ತಿಲ್ಲ. ಅವರು ಪ್ರವಾಸ ಹೋಗುತ್ತಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು.

ರಾಜ್ಯ ಸರ್ಕಾರಕ್ಕೆ ಐದು ವರ್ಷ ಜನ ಆಶೀರ್ವಾದ ಮಾಡಿದ್ದಾರೆ. ಜನ ನಮಗೆ ಬೆಂಬಲಿಸಿ 136 ಸ್ಥಾನ ಕೊಟ್ಟಿದ್ದಾರೆ. ಐದು ವರ್ಷ ನಾವೇ ಆಡಳಿತ ಮಾಡುತ್ತೇವೆ.  ಮತ್ತೆ ಚುನಾವಣೆಗೆ ಹೋಗುತ್ತೇವೆ, ಮತ್ತೆ ಗೆಲ್ಲುತ್ತೇವೆ ಎಂದ ಅವರು, ರಮೇಶ ಜಾರಕಿಹೊಳಿ ಸೋತು ಕುಳಿತು ಏನೇನೋ ಹೇಳುತ್ತಿದ್ದಾರೆ ಅದಕ್ಕೆ ಮಹತ್ವವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next