Advertisement

ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ: ಇದರ ಬಗ್ಗೆ ನಾನೇನು ಹೆಚ್ಚು ಹೇಳುವುದಿಲ್ಲ; ಸಿಎಂ

01:48 PM Jul 10, 2024 | Team Udayavani |

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು ಹಿನ್ನೆಲೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಮಾರಂಭಕ್ಕಾಗಿ ಬುಧವಾರ ಸಿಎಂ ಸಿದ್ದರಾಮಯ್ಯ (Cm Siddaramaiah) ಮೈಸೂರಿಗೆ ಆಗಮಿಸಿದ್ದಾರೆ.

Advertisement

ಈ ವೇಳೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದ  (Muda Scam) ಬಗ್ಗೆ ಪ್ರತಿಕ್ರಿಯೆ ನೀಡಿದರು.

ಎಷ್ಟು ಸಲ ಇದರ ಬಗ್ಗೆ ಹೇಳುವುದು. ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ. ನಮ್ಮ ಜಮೀನಿನನ್ನ ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದಾರೆ. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ. ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ. ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುದು ಗೊತ್ತಾದರೇ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣ ಸಿಬಿಐಗೆ ವಹಿಸುವ ವಿಚಾರ‌ ನಮ್ಮ ಪೊಲೀಸರನೇ ಸಮರ್ಥರಿಲ್ಲವಾ. ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್ ನ್ನ ಸಿಬಿಐಗೆ ಕೊಟ್ಟಿದ್ದಾರೆ ಹೇಳಿ. ಈಗಿನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು. ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಡಿ ಅವರ ಕೆಲಸವನ್ನು ಅವರು ಮಾಡುತ್ತಾರೆ. ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ. ದಾಳಿ ಮಾಡಲಿ ನಾವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದರು.

ರಾಮನಗರ ಜಿಲ್ಲೆಯ ಹೆಸೆರು ಬದಲಾವಣೆ ವಿಚಾರ ಬಗ್ಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಎಲ್ಲಾ ಮುಖಂಡರು ಬಂದಿದ್ದರು. ಮೊದಲಿನಿಂದಲೂ ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾಗಬೇಕು ಎಂಬುದು ಅವರ ಇಚ್ಚೇ. ಆ ಬಗ್ಗೆ ಮನವಿ ಕೊಟ್ಟಿದ್ದಾರೆ. ಕ್ಯಾಬಿನಟ್ ನಲ್ಲಿಟ್ಟು ತೀರ್ಮಾನ ಮಾಡುತ್ತೇವೆ ಎಂದರು.

Advertisement

ನಾವು ಬಂದರೇ ಹೆಸರು ಕಿತ್ತಾಕುತ್ತೇವೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ ಅವರು, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು. ಜನರು ಆಶೀರ್ವಾದ ಮಾಡಿದ ಕಾರಣ ನಾನು ಸಿಎಂ ಆಗಿದ್ದೇನೆ. ಇವರಿಗೆ ಜನರೇ ಆಶೀರ್ವಾದ ಮಾಡುವುದಿಲ್ಲ. ಇವರು ಇನ್ನೇಲಿ ಸಿಎಂ ಆಗುತ್ತಾರೆ. ಹೆಸರು ಬದಲಾವಣೆ ಮಾಡುವುದು ಭ್ರಮೆ ಎಂದರು.

ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಮೈಸೂರಿಗೆ ಆಗಮಿಸಿದ ಅವರನ್ನು ಜಿಲ್ಲಾಡಳಿತದಿಂದ ಸ್ವಾಗತಿಸಿತು. ಪೊಲೀಸ್ ಗೌರವ ವಂದನೆಯನ್ನು ಸಿಎಂ ಸ್ವೀಕರಿಸಿದರು.

ಸಿಎಂಗೆ ಸಚಿವ ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸಂಸದ ಸುನಿಲ್ ಬೋಸ್, ಶಾಸಕ ಅನಿಲ್ ಚಿಕ್ಕಮಾಧು, ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಸಾಥ್‌ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next