Advertisement
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಿಕ್ರಂ ಗೌಡಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಶರಣಾಗಿರಲಿಲ್ಲ. ವಿಕ್ರಂನನ್ನು ಹಿಡಿದವರಿಗೆ ಕೇರಳ ಸರಕಾರ 25 ಲಕ್ಷ ರೂ. ಹಾಗೂ ಕರ್ನಾಟಕ ಸರಕಾರ 5 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು. ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ಕೌಂಟರ್ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.
ಪ್ರಗತಿಪರ ಚಿಂತಕರು ವಿಕ್ರಂ ಗೌಡ ಸಾವಿನ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ| ಜಿ. ಪರಮೇಶ್ವರ್, ವಿಕ್ರಂ ಗೌಡ ಬಳಿ ಅಟೋಮ್ಯಾಟಿಕ್ ಮಷಿನ್ಗನ್ ಸೇರಿದಂತೆ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ, ಪೊಲೀಸರನ್ನೇ ವಿಕ್ರಂ ಶೂಟ್ ಮಾಡುವ ಸಾಧ್ಯತೆ ಇತ್ತು. ಅವರ ಮೇಲೆ 60ಕ್ಕೂ ಹೆಚ್ಚು ಕೇಸ್ಗಳು ಕೂಡ ಇದ್ದವು. ಇದು ನನಗೆ ಬಂದಿರುವ ಮಾಹಿತಿ ಎಂದು ಸ್ಪಷ್ಟಪಡಿಸಿದರು.