Advertisement
ಮುಡಾ ಹಗ ರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ-ಜೆಡಿಎಸ್‌ನವರ ಕೈವಾಡದಿಂದ ರಾಜ್ಯಪಾಲರು ಹೀಗೆ ಮಾಡ್ತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಹೇಳಿದಂತೆ ಕುಣಿಯುತ್ತಿದ್ದಾರೆ ಎಂದು ವಿರುದ್ಧ ಕಿಡಿಕಾರಿದರು.
Related Articles
Advertisement
ಪ್ರತಿಭಟನೆಗೆ ಬರದಿದ್ದರೆ ಗ್ಯಾರಂಟಿ ಸ್ಥಗಿತ: ಡಂಗೂರ!ನಂಜನಗೂಡು: ಪ್ರತಿಭಟನೆಗೆ ಬಾರದಿದ್ದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ವಿಚಾರವಾಗಿ ಡಂಗೂರ ಸಾರಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸೋಮವಾರ ವೈರಲ್ ಆಗಿದೆ. ನಂಜನಗೂಡು ತಾಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ಪಟ್ಟಣದಲ್ಲಿ ರಾಜ್ಯಪಾಲರ ವಿರುದ್ಧದ ಪ್ರತಿಭಟನೆಗೆ ಬಾರದಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ಡಂಗೂರ ಸಾರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ. ಕಾಂಗ್ರೆಸ್ ನಾಯಕರು ಜನರಿಗೆ ಗ್ಯಾರಂಟಿಗಳನ್ನು ನಿಲ್ಲಿಸುವ ಬೆದರಿಕೆಯೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಪ್ರತಿಭಟನೆ ಮಾಡಲು ಕರೆತರುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.