Advertisement

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

12:29 AM Jun 19, 2024 | Team Udayavani |

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದಿದ್ದರೂ ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಖರೀದಿಸಿದರೆ ಸಹಿಸುವುದಿಲ್ಲ. ಅನಾವಶ್ಯಕವಾಗಿ 4ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

Advertisement

ಸಚಿವ ಬಿ.ನಾಗೇಂದ್ರ ರಾಜೀನಾಮೆ ಅನಂತರ ಇದೇ ಮೊದಲ ಬಾರಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಕ್ರೀಡಾ ಇಲಾಖೆಗಳ ಪರಿಶೀಲನ ಸಭೆ ನಡೆಸಿದ ಅವರು, ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, ಶೇ. 99.75 ಸಾಧನೆಯಾಗಿದೆ. ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸುವುದನ್ನು ಸಹಿಸಲಾಗುವುದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಸೂಚಿಸಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಒಟ್ಟು 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು 194.71 ಕೋಟಿ ರೂ. ಒದಗಿಸಲಾಗಿದೆ. ಎಸೆಸೆಲ್ಸಿಯಲ್ಲಿ ಶೇ.77 ಫಲಿತಾಂಶ ಬಂದಿದ್ದು ಫಲಿತಾಂಶ ಉತ್ತಮಪಡಿಸಬೇಕು. 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. ಹಾಸ್ಟೆಲ್‌ಗ‌ಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next