Advertisement

CM Siddaramaiah ಅಬಕಾರಿ ತೆರಿಗೆ ಸಂಗ್ರಹ ನಿರೀಕ್ಷಿತ ಗುರಿ ಮುಟ್ಟಿಲ್ಲ

08:28 PM Jun 11, 2024 | Team Udayavani |

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣ ವೇಳೆ ಸನ್ನದುದಾರರಿಗೆ ಕಿರುಕುಳ ನೀಡದಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನ ಸಭೆ ಹಾಗೂ ಅಬಕಾರಿ ಇಲಾಖೆ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ಗುರಿ ನಿಗದಿಪಡಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕೆಂದು ಅವರು ಸೂಚಿಸಿದರು.

ಚುನಾವಣ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡಿ. ಇಲಾಖೆಯಲ್ಲಿ ಕಾನ್‌ಸ್ಟೆಬಲ್‌, ಸಬ್‌ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ತಂತ್ರಾಂಶ ಲೋಕಾರ್ಪಣೆ
ಅಬಕಾರಿ ಇಲಾಖೆ ವ್ಯವಹಾರಗಳನ್ನು ಸರಳಗೊಳಿಸಲು ನೂತನ ಆನ್‌ಲೈನ್‌ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಯಿತು. ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶ ಕಲ್ಪಿಸಲಾಗಿದೆ.

ಅಬಕಾರಿ ಸಚಿವ ಆರ್‌. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ.ಅತೀಕ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫ‌ರ್‌, ಅಬಕಾರಿ ಇಲಾಖೆಯ ಆಯುಕ್ತ ಡಾ| ರವಿಶಂಕರ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next