ಕಾರವಾರ: ಖಾಸಗಿ ಸಂಸ್ಥೆಗಳು ನೀಡುವ ಎಫ್ ಎಸ್ ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅವರು ಬುಧುವಾರ ಬೆಳಿಗ್ಗೆ ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಫ್ ಎಸ್ ಎಲ್ ವರದಿ ವಿಚಾರದಲ್ಲಿ ಖಾಸಗಿ ಸಂಸ್ಥೆ ನೀಡುವ ವರದಿಯನ್ನು ಸರಕಾರ ಒಪ್ಪುವುದಿಲ್ಲ, ಬದಲಾಗಿ ಪೊಲೀಸ್ ಇಲಾಖೆಯಿಂದ ನೀಡುವ ವರದಿಯೇ ಅಧಿಕೃತ ಎಂದು ಅವರು ಹೇಳಿದರು.
ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಇಲಾಖೆ ವತಿಯಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: Arrested: ಆರೆಸ್ಸೆಸ್ ಕಾರ್ಯಕರ್ತನಿಗೆ ಚಾಕು ಇರಿದವನು 5 ವರ್ಷ ಬಳಿಕ ಸೆರೆ