Advertisement

Lok Sabha ಚುನಾವಣೆ ಬಳಿಕ ಸಿಎಂ ಸಿದ್ದು ರಾಜೀನಾಮೆ ಖಚಿತ: ಶೆಟ್ಟರ್‌

06:46 PM Mar 24, 2024 | Team Udayavani |

ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತರ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೆ ಕೊಡುತ್ತಾರೆ. ನಾವು ಆಪರೇಷನ್‌ ಮಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ನಲ್ಲಿನ ಗುಂಪುಗಾರಿಕೆಯಿಂದ ಸರ್ಕಾರ ಪತನವಾಗುತ್ತದೆ. ಅದಕ್ಕೆ ಗುಬ್ಬಿ ಶಾಸಕರ ಬಹಿರಂಗ ಹೇಳಿಕೆಯೇ ಸಾಕ್ಷಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಗುಂಪುಗಳಿವೆ. ಈ ಗುಂಪುಗಳಿಂದ ಸರ್ಕಾರ ಬಿದ್ದು ಹೋಗಲಿದೆ. ಅಧಿಕಾರಕ್ಕಾಗಿ ಅವರಲ್ಲಿಯೇ ಕಿತ್ತಾಟ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ದಲಿತ ಸಿಎಂ ಕೂಗು ಕೇಳಿ ಬಂದಿತ್ತು. ಅನಂತರ ನಾಲ್ಕು ಡಿಸಿಎಂ ಮಾಡಬೇಕೆಂಬುದು ಮುನ್ನೆಲೆಗೆ ಬಂದಿತ್ತು. ಈಗ ಸಿಎಂ ಬದಲಾವಣೆ ವಿಚಾರ ಜೋರಾಗಿ ಚರ್ಚೆ ಆಗುತ್ತಿದೆ.

2014ರಲ್ಲೂ ಸಿದ್ದರಾಮಯ್ಯ ಸಿಎಂ ಇದ್ದಾಗ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಇದೆಲ್ಲ ಬೆಳವಣಿಗೆ ನೋಡಿದರೆ ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುವುದು ಖಚಿತ. ಆದರೆ ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ರೂ. ಆಮಿಷ ಹಸಿ ಸುಳ್ಳು. ಇದನ್ನು ಶಾಮನೂರು ಶಿವಶಂಕರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್‌ನಲ್ಲೇ ಒಳತಂತ್ರ ರೂಪಿಸಲಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next