Advertisement

ಬಜೆಟ್‌ ಪೂರ್ವಭಾವಿ ಚರ್ಚೆ ಆರಂಭಿಸಿದ ಸಿಎಂ 

12:50 AM Jan 17, 2019 | |

ಬೆಂಗಳೂರು: ಆಪರೇಷನ್‌ ಕಮಲ ಕಾರ್ಯಾಚರಣೆ ವಿಫ‌ಲವಾಗುವ ಲಕ್ಷಣಗಳು ಕಂಡುಬರುತ್ತಿದ್ದಂತೆ ಒಂದಷ್ಟು ನಿರಾಳರಾದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಇಲಾಖಾವಾರು ಬಜೆಟ್‌ ಪೂರ್ವಭಾವಿ ಸಭೆಗೆ ಚಾಲನೆ ನೀಡಿದರು. ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಅವರು, 2019-20 ನೇ ಸಾಲಿನ ಬಜೆಟ್‌ನಲ್ಲಿ ರೂಪಿಸಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಹಿಂದಿನ ವರ್ಷದ ಬಜೆಟ್‌ನಲ್ಲಿ ಘೋಷಿಸಲಾದ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಮಾಹಿತಿ ಪಡೆದರು.

Advertisement

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಜನವರಿ 28 ರವರೆಗೂ ಆರ್ಥಿಕ, ಗೃಹ,ಸಮಾಜ ಕಲ್ಯಾಣ, ಕೈಗಾರಿಕೆ, ಇಂಧನ, ಲೊಕೋಪಯೋಗಿ ಸೇರಿದಂತೆ ಇಲಾಖಾವಾರು ಬಜೆಟ್‌ ಪೂರ್ವಭಾವಿ ಸಭೆಗಳನ್ನು ನಿಗದಿಪಡಿಸಲಾಗಿದೆ. ಫೆ.8 ರಂದು ಬಜೆಟ್‌ ಮಂಡನೆ ಮಾಡಲು ನಿರ್ಧರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next