ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದೇ ಅಕ್ಟೋಬರ್, 25 ಅಥವಾ ನವೆಂಬರ್, 3 ರೊಳಗೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.
ಕೊಡಗಿನ ವಿವಿಧೆಡೆ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಭೇಟಿ ನೀಡುವ ಸಂದರ್ಭ ಜಿಲ್ಲಾ ಪಂಚಾಯತ್ ನೂತನ ಭವನ ಉದ್ಘಾಟನೆ, ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ.ಸದಸ್ಯರಾದ ಮೂಕೊಂಡ ಪಿ.ಸುಬ್ರಮಣಿ, ಅಚ್ಚಪಂಡ ಎಂ.ಮಹೇಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಮಹೇಶ್ ಇತರರು ಪಸ್ಥಿತದ್ದರು.
ಸಚಿವರು ಮಾಕುಟ್ಟ ರಸ್ತೆ ವೀಕ್ಷಿಸಿದರು. ಬಳಿಕ ಅವರು ನೆಲ್ಯಹುದಿಕೇರಿ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ Óಸೂಕ್ತ ಜಾಗ ಗುರ್ತಿಸಿ ಶಾಶ್ವತ ಮನೆ ನಿರ್ಮಿಸಿಕೊಡಲಾಗುವುದು. ಎಂದು ತಿಳಿಸಿದರು. ಅದಕ್ಕೂ ಮೊದವು ವಿರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಶಾಸಕ ಅಪ್ಪಚ್ಚುರಂಜನ್ ನದಿ ದಡದಲ್ಲಿ ವಾಸಿಸುತ್ತಿದ್ದ ಎಲ್ಲಾ ಪ್ರವಾಹ ಪೀಡಿತ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು. ಶಾಸಕಸುನಿಲ್ ಸುಬ್ರಮಣಿ, ಜಿ.ಪಂ.ಸ¨ಸ್ಯೆಸುನಿತಾ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ, ಉಪ ವಿಭಾಗಾಧಿಕಾರಿ.ಜವರೇಗೌಡ, ತಹಶೀಲ್ದಾರ್ ಗೋವಿಂದ ರಾಜು ಉಪಸ್ಥಿತರಿದ್ದರು.