Advertisement

ರಾಜ್ಯಗಳಿಗೆ ಆಗುವ ಆದಾಯ ನಷ್ಟ ಭರಿಸಲು ಸಿಎಂ ಪಟ್ಟು

03:45 AM Apr 24, 2017 | Team Udayavani |

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡಿರುವ ಪರಿಹಾರ ಮೊತ್ತ ತೀರಾ ಕಡಿಮೆಯಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯವನ್ನು ಅಂಕಿ-ಅಂಶ ಸಮೇತ ಪ್ರಧಾನಿಯವರಿಗೆ ವಿವರಿಸಿದರು. ವಿವಿಧ ಯೋಜನೆಗಳಲ್ಲಿ ರಾಜ್ಯಕ್ಕೆ ನೀಡುತ್ತಿರುವ ಕೇಂದ್ರದ ಪಾಲಿನ ಅನುದಾನವೂ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಭಾನುವಾರ ನಡೆದ ನೀತಿ ಆಯೋಗದ ಮೂರನೇ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸತತ ಆರು ವರ್ಷಗಳಿಂದ ರಾಜ್ಯದ ರೈತರು ಭೀಕರ ಬರಗಾಲದಿಂದ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ವರ್ಷವೂ ಮುಂಗಾರು ಹಂಗಾಮಿನಲ್ಲಿ 135 ತಾಲೂಕುಗಳು ಮತ್ತು ಹಿಂಗಾರು ಹಂಗಾಮಿನಲ್ಲಿ 160 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡಿರುವ ಪರಿಹಾರ ಮೊತ್ತ ತೀರಾ ಕಡಿಮೆಯಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯವನ್ನು ಅಂಕಿ-ಅಂಶ ಸಮೇತ ಪ್ರಧಾನಿಯವರಿಗೆ ವಿವರಿಸಿದರು. ವಿವಿಧ ಯೋಜನೆಗಳಲ್ಲಿ ರಾಜ್ಯಕ್ಕೆ ನೀಡುತ್ತಿರುವ ಕೇಂದ್ರದ ಪಾಲಿನ ಅನುದಾನವೂ ಕಡಿಮೆಯಾಗಿದೆ ಎಂದು ವಿವರಿಸಿದರು.
 

Advertisement

Udayavani is now on Telegram. Click here to join our channel and stay updated with the latest news.

Next