ಉಡುಪಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 01 (ಮಂಗಳವಾರ) ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹೆಜಮಾಡಿ ಟೋಲ್ ಗೇಟ್ ಬಳಿ ಹಾರ್ದಿಕವಾಗಿ ಸ್ವಾಗತಿಸಲಿದೆ.
ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಎಲ್ಲಾ ಘಟಕಗಳ ಅಧ್ಯಕ್ಷರುಗಳು , ಎಲ್ಲಾ ಸಮಿತಿಗಳ ಸದಸ್ಯರು, ಕಾರ್ಯಕರ್ತರು ಹಾಜರಿದ್ದು ಜಿಲ್ಲೆಗೆ ಬರಮಾಡಿಕೊಳ್ಳಲು ಬೆಳಗ್ಗೆ 11 ಗಂಟೆಗೆ ಹೆಜಮಾಡಿ ಟೋಲ್ ಗೇಟ್ ಬಳಿ ಹಾಜರಿರಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ವಿನಂತಿಸಿಕೊಂಡಿದ್ದಾರೆ.
ಆ.1 ರಂದು ಸಿಎಂ ಬೆಳಗ್ಗೆ ವಿಮಾನ ಮೂಲಕ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಧ್ಯಾಹ್ನ 12.30 ರಿಂದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ3.30 ಕ್ಕೆ ಉಡುಪಿಯಿಂದ ಹೊರಟು ಸಂಜೆ4.15 ಕ್ಕೆ ದ.ಕ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ರಾತ್ರಿ 9 ಕ್ಕೆ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.