Advertisement

ಅಭಿವೃದ್ಧಿಗೆ ಕೊಟ್ಟ ಅನುದಾನ ಹಿಂಪಡೆಯಲು ಸಿಎಂ ಮುಂದಾಗಿದ್ದಾರೆ: ಕೃಷ್ಣಾರೆಡ್ಡಿ

06:54 PM Sep 05, 2019 | Team Udayavani |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ, ಚಿಂತಾಮಣಿ ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಕೊಟ್ಟ ಅನುದಾವನ್ನು ಹಿಂಪಡೆಯಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆಂದು ವಿಧಾನಸಭಾ ಉಪಸಭಾಧ್ಯಕ್ಷ ಜೆ.ಕೃಷ್ಣಾರೆಡ್ಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಮೈತ್ರಿ ಸರ್ಕಾರಲ್ಲಿ ಬಿಡುಗಡೆ ಮಾಡಿದ್ದ ಸುಮಾರು 73 ಕೋಟಿ ಅನುದಾನವನ್ನು ಈಗಿನ ಬಿಜೆಪಿ ಸರ್ಕಾರ ವಾಪಸ್ಸು ಪಡೆಯಲು ಮುಂದಾಗಿದೆ. ಈಗಾಗಲೇ ಕಾಮಗಾರಿಗಳಿಗೆ ಟೆಂಡರ್ ಕರೆದು ಚಾಲನೆ ನೀಡುವ ಹಂತಕ್ಕೆ ಬಂದಿದ್ದರೂ ಸಿಎಂ ಯಡಿಯೂರಪ್ಪ ದ್ಷೇಷದ ರಾಜಕಾರಣ ಮಾಡಲು ಹೊರಟಿದ್ದಾರೆಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next