Advertisement

ಲಾಕ್ ಡೌನ್ ಮೀರಿ ಹೊರಬಂದರೆ ಅರೆಸ್ಟ್ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

10:43 AM Mar 27, 2020 | keerthan |

ಬೆಂಗಳೂರು: ಪ್ರಧಾನ ಮಂತ್ರಿ‌ ನರೇಂದ್ರ ಮೋದಿಯವರ ಸೂಚನೆಯಂತೆ 21 ದಿನಗಳ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ‌ ನೀಡಿದರು.

Advertisement

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಮಾಲೋಚಿಸಿದ ಅವರು, ಲಾಕ್ ಡೌನ್ ಮೀರಿ ಹೊರ‌ಬರುವವರನ್ನು ಅರೆಸ್ಟ್ ಮಾಡುವಂತೆ ಸೂಚನೆ ನೀಡಿದರು.

ಎಲ್ಲಾ ಜಿಲ್ಲೆಯ ಬಾರ್ಡರ್ ಗಳನ್ನು ಸೀಲ್ ಮಾಡಬೇಕು.  ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚನೆ ನೀಡಲಾಯಿತು.

ಈಗಾಗಲೇ ಡಿಸ್ಟಲರಿ‌ ಕಂಪನಿಗಳ ಜೊತೆ ಸ್ಯಾನಿಟೈಸರ್ ಉತ್ಪಾದನೆ‌ ಮಾಡಲು ಸೂಚನೆ ನೀಡಲಾಗಿದ್ದು ಕೆಲವು ಕಂಪನಿಗಳ ಉಚಿತವಾಗಿ ನೀಡಲು‌ ಮುಂದೆ ಬಂದಿವೆ ಅದರ ಸದಾವಕಾಶ ಬಳಸಿಕೊಳ್ಳಲು ಸೂಚನೆ ನೀಡಿದರು.

ನಿಮ್ಮ ಏನೇ ಸಮಸ್ಯೆ ಇದ್ದರು ಕೂಡಲೇ ‌ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್ ಗಳು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ದ ಕ್ರಮ‌ಕೈಗೊಳ್ಳಲು ತಿಳಿಸಲಾಯಿತು.

Advertisement

ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ‌ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಬೆಡ್ ಕೋವಿಡ್ ಗಾಗಿ‌ ಮೀಸಲಿಡುವಂತೆ ಸೂಚನೆ ನೀಡಲಾಯಿತು. ವೈದ್ಯರು ಮತ್ತು ನರ್ಸ್ ಗಳಿಗೆ ತೊಂದರೆ ಕೊಡುವ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಬೇಕು ಎಂದು ಸಿಎಂ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next