Advertisement

Kodagu: ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಭೇಟಿ.. ಅಧಿಕಾರಿಗಳ ಜೊತೆ ಚರ್ಚೆ

03:30 PM Aug 02, 2024 | Team Udayavani |

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

Advertisement

ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Mangaluru: ವ್ಯಾಪಾರಿಗಳ ಪ್ರತಿರೋಧದ ಮಧ್ಯೆಯೇ ಬೀದಿ ಬದಿ ವ್ಯಾಪಾರ ತೆರವು

Advertisement
Advertisement

Udayavani is now on Telegram. Click here to join our channel and stay updated with the latest news.

Next