Advertisement

ಯಾದಗಿರಿಗೆ ನಾಳೆ ಸಿಎಂ: ಸಿದ್ಧತೆ ಪರಿಶೀಲನೆ

12:58 PM Jan 05, 2021 | Team Udayavani |

ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪಅವರು ಜ.6ರಂದು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲು ಆಗಮಿಸುತ್ತಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌ ಸೂಚನೆ ನೀಡಿದರು.

Advertisement

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಮಧ್ಯಾಹ್ನ 2.30ಕ್ಕೆ ಯಾದಗಿರಿ ತಾಲೂಕಿನಮುದ್ನಾಳ್‌ ಗ್ರಾಮದಲ್ಲಿರುವ ನೂತನ ಜಿಲ್ಲಾಸ್ಪತ್ರೆಆವರಣದಲ್ಲಿ ಸಿಎಂ ಬಿಎಸ್‌ವೈ 56 ಕೋಟಿ ರೂ.ಗಳವೆಚ್ಚದಲ್ಲಿ ನಿರ್ಮಾಣಗೊಂಡಿರುವ 300 ಹಾಸಿಗೆಗಳನೂತನ ಜಿಲ್ಲಾಸ್ಪತ್ರೆ, 17.66 ಕೋಟಿ ರೂ. ಗಳ ವೆಚ್ಚದಲ್ಲಿ ವರ್ಕನಳ್ಳಿಯಲ್ಲಿ ನಿರ್ಮಾಣಗೊಂಡಿರುವಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲೆ, 3.80 ಕೋಟಿರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಯಾದಗಿರಿ ನಗರದಲ್ಲಿ ನೂತನ ನಗರ ಸಾರಿಗೆ ಬಸ್‌ನಿಲ್ದಾಣ ಹಾಗೂ ವಿಭಾಗೀಯ ಕಚೇರಿ, 1.35 ಕೋಟಿ ರೂ.ಗಳ ವೆಚ್ಚದ ಶಹಾಪುರ ತಾಲೂಕಿನ ಬೆಂಡೆಬೆಂಬಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುಸರ್ಕಾರಿ ಪದವಿ ಪೂರ್ವ ಕಾಲೇಜು, 1.25 ಕೋಟಿರೂ.ಗಳ ವೆಚ್ಚದಲ್ಲಿ ವಡಗೇರಾ ತಾಲೂಕಿನ ಸರ್ಕಾರಿ ಪ್ರೌಢಶಾಲೆಗೆ ಹೆಚ್ಚವರಿ 10 ಕೋಣೆಗಳ ನಿರ್ಮಾಣ,1 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ  ಸರ್ಕಾರಿ ಪ್ರೌಢಶಾಲೆ ಕಟ್ಟಡ, 50 ಲಕ್ಷ ರೂ.ಗವೆಚ್ಚದಲ್ಲಿ ಯಾದಗಿರಿ ನಗರದ ಮುರುಘೇಂದ್ರ ಮಠದ ಹತ್ತಿರ ಯಾತ್ರಿಕ ನಿವಾಸ ಕಟ್ಟಡ ಹಾಗೂ 50 ಲಕ್ಷ ರೂ.ಗಳ ವಡಗೇರಾ ತಾಲೂಕಿನ ಸಂಗಮನಾಥ ದೇವಸ್ಥಾನದ ಹತ್ತಿರ ಯಾತ್ರಿ ನಿವಾಸ ಕಟ್ಟಡವನ್ನು ಮುಖ್ಯಮಂತ್ರಿಗಳು ಉದ್ಘಾಟಿಸುವರು.

ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಯಾವುದೇ ಲೋಪದೋಷಗಳಾಗದಂತೆ ಸಂಬಂಧಿ ಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮ ನಡೆಯವ ಸ್ಥಳದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು, ಮುಖ್ಯವಾಗಿ ಕಾರ್ಯಕ್ರಮ ನಡೆಯುವ ದಿನದಂದುಆಗಮಿಸುವವರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆಒಳಪಡಿಸಬೇಕು. ಮಾಸ್ಕ್ ಹಾಗೂ ಸ್ಯಾನಿಟೈಸರ್‌ವಿತರಣೆಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು. ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಲಹೆ ನೀಡಬೇಕು ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶಭಗವಾನ್‌ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ.ರಜಪೂತ್‌, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಪಾಟೀಲ್‌, ಯಾದಗಿರಿ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next