ಬೆಂಗಳೂರು: ಸಿದ್ದಗಂಗಾ ಶ್ರೀ ಗಳ ಆರೋಗ್ಯದಲ್ಲಿ ಕೊಂಚ ಮಟ್ಟಿನ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಶುಕ್ರವಾರ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದೌಡಾಯಿಸಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಭೇಟಿಯಾಗಿ ಹೊರಬಂದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ ‘ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರು ನನ್ನನ್ನು ಗುರುತು ಹಿಡಿದು ಮಾತನಾಡಿಸಿದರು. ಅವರ ಆರೋಗ್ಯ ಸ್ಥಿರ ವಾಗಿದೆ’ ಎಂದರು.
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಕೆ.ಜೆ.ಜಾರ್ಜ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಯಶಸ್ವಿ ಸ್ಟಂಟ್ ಅಳವಡಿಕೆ
ಶ್ರೀಗಳಿಗೆ ಸಂಜೆ 4 ಗಂಟೆಯ ವೇಳೆಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಡಾ. ರವೀಂದ್ರ ನೇತೃತ್ವದ ವುದ್ಯರ ತಂಡ ಶಸ್ತ್ರ ಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದಾರೆ ಎಂದು ವರದಿಯಾಗಿದೆ. ಅನ್ನನಾಳದಲ್ಲಿ ಸೊಂಕು ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶ್ರೀಗಳಿಗೆ ಆಸ್ಪತ್ರೆಯಲ್ಲಿ ವಿಶೇಷ ನಿಗಾ ವಹಿಸಿ ಚಿಕಿತ್ಸೆನೀಡಲಾಗುತ್ತಿದ್ದು, ಮಠದಲ್ಲಿ ಅವರಿಗೆ ಪೂಜೆಗೆ ಬೇಕಾದ ಎಲ್ಲಾ ವಸ್ತುಗಳನ್ನು ಒದಗಿಸಿದ್ದೇವೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.