Advertisement

ಉಕ್ರೇನ್ ನಲ್ಲಿ ಮೃತ ಪಟ್ಟಿದ್ದ ನವೀನ್ ಮನೆಗೆ ಸಿಎಂ: ಪರಿಹಾರ ಧನ ವಿತರಣೆ

06:10 PM Mar 05, 2022 | Team Udayavani |

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿಯಲ್ಲಿ ಮೃತ ನವೀನ್ ಗ್ಯಾನಗೌಡ್ರ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Advertisement

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬಾಂಬಿಂಗ್ ಪರಿಣಾಮ ನವೀನ ಸಾವನ್ನಪ್ಪಿದ್ದಾನೆ‌. ವಿದ್ಯಾರ್ಜನೆಗೆ ತೆರಳಿದ್ದ ನವೀನಗೆ ಈ ರೀತಿ ಆಗುತ್ತೆ ಅಂತಾ ಯಾರೂ ಊಹಿಸಿರಲಿಲ್ಲ.ಶಬ್ದಗಳಲ್ಲಿ ಹೇಳಲು ಸಾಧ್ಯವಿಲ್ಲ.ನವೀನನ ಪಾರ್ಥೀವ ಶರೀರವನ್ನ ತಾಯ್ನಾಡಿಗೆ ತರುವ ಪ್ರಯತ್ನ ನಿರಂತರವಾಗಿ ಮಾಡಲಾಗುತ್ತಿದೆ ಎಂದರು.

ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದು ಅಲ್ಲಿ ಸುತ್ತಲೂ ಬಾಂಬಿಂಗ್ ಅಗ್ತಿದೆ. ಹೀಗಾಗಿ ಮೃತದೇಹ ತರಲು ಆಗುತ್ತಿಲ್ಲ ಎಂದರು. ಇವತ್ತು ಯುದ್ದ ವಿರಾಮ ಆಗಿದೆ. ಆದಷ್ಟು ಬೇಗ ಪಾರ್ಥೀವ ಶರೀರವನ್ನ ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತೆ.ಕೆಲವರು ನಡೆದುಕೊಂಡು ಬಂದಿದ್ದಾರೆ. ಕೆಲವರು ಬಂಕರ್ ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ ಹತ್ತು ಜನರು ಹೋಗಿದ್ದರು ಐವರು ಮರಳಿ ಬಂದಿದ್ದಾರೆ, ಉಳಿದ ಐವರನ್ನ ಕರೆತರುವ ಪ್ರಯತ್ನ ಮಾಡಲಾಗುತ್ತೆ ಎಂದರು.

25 ಲಕ್ಷ ರೂ.ಪರಿಹಾರ
ಮೃತ ನವೀನ್ ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂಪಾಯಿ ಸರಕಾರದಿಂದ ಪರಿಹಾರ ನೀಡಲಾಗಿದೆ. ಹಿರಿಯ ಮಗನಿಗೆ ಸೂಕ್ತ ಉದ್ಯೋಗ ನೀಡುವ ಬಗ್ಗೆ ಚಿಂತನೆ ಇದೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಪರಾಮರ್ಶೆ
ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಪರಿಶೀಲನೆ ಬಗ್ಗೆ ಚಿಂತನೆ ನಡೆಸಲಾಗುವುದು.ಕೇಂದ್ರ ಮಟ್ಟದಲ್ಲೂ ದೊಡ್ಡ ಚರ್ಚೆ ಆಗಿದೆ. ಎಂಬಿಬಿಎಸ್ ಸೆಲೆಕ್ಷನ್ ಪ್ರಕ್ರಿಯೆ, ಸೀಟು ಹಂಚಿಕೆ ಕೇಂದ್ರ‌ ಮಟ್ಟದಲ್ಲಿ ಚರ್ಚೆ ಆಗಲಿದೆ. ಎಲ್ಲ ವಿಷಯಗಳ ಬಗ್ಗೆ ಚರ್ಚೆ ಆಗಿದೆ. ನವೀನ ಪಾರ್ಥೀವ ಶರೀರ ಹಾಗೂ ಅಲ್ಲಿ ಸಿಲುಕಿಕೊಂಡಿರೋರನ್ನ ಕರೆತರುವುದು ನಮ್ಮ ಮುಂದಿರುವ ಎರಡು ದೊಡ್ಡ ಕೆಲಸ ಎಂದು ಹೇಳಿದರು.

Advertisement

ಈ ವೇಳೆ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ, ಸಚಿವರಾದ ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ,ಸಂಸದ ಶಿವಕುಮಾರ ಉದಾಸಿ, ಶಾಸಕ ಅರುಣಕುಮಾರ ಪೂಜಾರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next