Advertisement

ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ

02:32 PM May 04, 2021 | Team Udayavani |

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೊಡಲಾಗುವ ರೆಮಿಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವಂತೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದರು.

Advertisement

ರೆಮ್ ಡಿಸಿವಿರ್ ಕೊರತೆ ಬಗ್ಗೆ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ  ಅವರು,  ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಅಫಜಲಪುರದಲ್ಲಿ ನಾಲ್ವರು ರೋಗಿಗಳ ಸಾವು: ಆಕ್ಸಿಜನ್ ಕೊರತೆ ಕಾರಣವಲ್ಲ

ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ರಾಜ್ಯದ ಕೋವಿಡ್ ಸ್ಥಿತಿಗತಿ, ಕರ್ಫ್ಯೂ ಮುಂದುವರಿಕೆಯ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next