Advertisement

ಏಕತೆಯ ಪ್ರತಿಜ್ಞೆ ಬೋಧಿಸಿದ ಸಿಎಂ

10:59 AM Nov 01, 2017 | |

ಬೆಂಗಳೂರು: ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ದಿವಸದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿ ಹಾಗೂ ನೌಕರರಿಗೆ ಏಕತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

Advertisement

“ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ. ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುತ್ತೇನೆ.

ರಾಷ್ಟ್ರೀಯ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ನಾನು ನನ್ನದೇ ಆದ ಕೊಡುಗೆ ನೀಡುತ್ತೇನೆ ಎಂದು ಒಮ್ಮನಸಿನಿಂದ ಪ್ರತಿಜ್ಞೆ ಮಾಡುತ್ತೇನೆ,’ ಎಂದು ಮುಖ್ಯಮಂತ್ರಿಗಳಿಂದ ಸಚಿವಾಲಯದ ಅಧಿಕಾರಿ ಮತ್ತು ನೌಕರರು ಪ್ರತಿಜ್ಞೆ ಸ್ವೀಕರಿಸಿದರು. 

ಈ ವೇಳೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಕೆ. ರತ್ನಪ್ರಭ, ಟಿ.ಎಂ. ವಿಜಯಭಾಸ್ಕರ್‌ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಅತೀಖ್‌ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ  ಅಧಿಕಾರಿಗಳು ಹಾಗೂ ಸಚಿವಾಲಯದ ನೌಕರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next