ಮಂಗಳೂರು: ಅಪೇಕ್ಷಿತರನ್ನು ಮಂತ್ರಿ ಮಾಡುವುದು ಮುಖ್ಯಮಂತ್ರಿ ಗಳ ಪರಾಮಾಧಿಕಾರ. ಸಚಿವ ಸ್ಥಾನದ ವಿಚಾರವಾಗಿ ಶಾಸಕರ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರು ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡುವುದು ತಪ್ಪಲ್ಲ, ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ಸಚಿವ ಸ್ಥಾನ ಕೊಡುವುದು ಮುಖ್ಯಮಂತ್ರಿಗಳು ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿ ವಿಚಾರ ಎಂದರು.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಯಾರೂ ಪ್ರಶ್ನೆ ಎತ್ತಿಲ್ಲ. ನಾಯಕತ್ವದ ಬದಲಾವಣೆ ಇಲ್ಲ ಎಂದು ನಾಲ್ಕು ತಿಂಗಳಿನಿಂದ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಿಸುವ ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ: ಈಶ್ವರಪ್ಪ
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ, ಎಲ್ಲರಿಗೂ ಸಚಿವರಾಗುವ ಅಪೇಕ್ಷೆಯಿದೆ. ಅಪೇಕ್ಷೆ ಮಾಡೋದು ತಪ್ಪಲ್ಲ.ಇದರ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ ಎಂದರು.