ಬೆಂಗಳೂರು : ಸಚಿವ ಸಂಪುಟದ ಕುರಿತು ಮುಖ್ಯಮಂತ್ರಿಗಳದ್ದು ಪರಮೋಚ್ಛ ಅಧಿಕಾರ, ನಾನು ಕೇವಲ ತಂಡದ ಸದಸ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.
ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು , ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಕೈಬಿಡಬೇಕು ಎನ್ನುವುದು ಅವರ ಪರಮೋಚ್ಛ ಅಧಿಕಾರ ಎಂದರು.
ಅಭಿವೃದ್ಧಿಯ ಶಕೆ ಇನ್ನಷ್ಟು ಗಟ್ಟಿ
ಸಂಕ್ರಾಂತಿ ಬಳಿಕ ಬೊಮ್ಮಾಯಿ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಅಪಾರ ಅಭಿವೃದ್ಧಿ ಆಗುತ್ತದೆ, ರೈತರಿಗೆ, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಆದ್ಯತೆ ನೀಡುತ್ತೇವೆ. ಹೊಸ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದ್ದು, ಅದು ಇನ್ನಷ್ಟು ಗಟ್ಟಿಯಾಗುತ್ತದೆ ಎಂದರು.
ವಿರೋಧ ಪಕ್ಷಗಳು ನಮ್ಮ ಅಭಿವೃದ್ಧಿ, ಆಡಳಿತದ ಪರಿ ನೋಡಿ ಹತಾಶರಾಗುತ್ತಾರೆ ಎಂದರು.