Advertisement
ಕೋವಿಡ್ -19 ಸೋಂಕು ಪ್ರಕರಣಗಳು ಪತ್ತೆಯಾಗದಿರುವ ಜಿಲ್ಲೆಗಳಲ್ಲೂ ಬೇರೆ ಬೇರೆ ಕಾಯಿಲೆಗಳ ಚಿಕಿತ್ಸೆಗೆ ಬರುವವರನ್ನು ಕೋವಿಡ್ -19 ಸೋಂಕುಅನುಮಾನ ಇದ್ದರೆ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ರೋಗ ಲಕ್ಷಣ ಕಂಡು ಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು, ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡ ಬೇಡಿ ಎಂದು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಜೊತೆ ಸಮಾಲೋಚನೆ ನಡೆಸಿದ ಅವರು ತುರ್ತು ಕ್ರಮಗಳ ಬಗ್ಗೆ ಸೂಚನೆ ನೀಡಿದರು.
– ಪ್ರಕರಣಗಳು ಪ್ರಾರಂಭದಲ್ಲಿಯೇ ವರದಿಯಾದಲ್ಲಿ ಚಿಕಿತ್ಸೆ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ಸಹಕಾರಿಯಾಗುವುದು. ಕೋವಿಡ್ -19 ಲಕ್ಷಣ ಕಂಡು ಬಂದ ತಕ್ಷಣ ವೈದ್ಯರ ಸಂಪರ್ಕಿಸಲು ಮನವಿ – ಶುಕ್ರವಾರ ಬೆಳಿಗ್ಗೆವರೆಗೆ 38 ಪ್ರಕರಣಗಳು ವರದಿಯಾಗಿದ್ದು, ಚಿಕಿತ್ಸೆ ವಿಧಿ-ವಿಧಾನಗಳಿಗೆ ಹೆಚ್ಚಿನ ಒತ್ತು ನೀಡಲು ಅಧಿಕಾರಿಗಳಿಗೆ ಸೂಚನೆ.
Related Articles
ಸಂಪರ್ಕಿಸುವಂತೆ ಮನವಿ
Advertisement
– ಐಸಿಯು ನಲ್ಲಿರುವ ವ್ಯಕ್ತಿಗಳ ಚಿಕಿತ್ಸೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು, ಅವರಿಗೆ ಕೆಲವು ವಿಶೇಷ ಪರೀಕ್ಷೆಗಳನ್ನು ನಡೆಸಲು ತೀರ್ಮಾನ
– ಜ್ವರ, ಶೀತ, ಉಸಿರಾಟದ ತೊಂದರೆ ಇರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿದೆ ಎಂದು ತಜ್ಞರ ಅಭಿಪ್ರಾಯ.
– ಪ್ರತಿ ಜಿಲ್ಲೆಯಲ್ಲಿ ಎರಡು ಹಾಗೂ ಪ್ರತಿ ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಪರೀಕ್ಷಾ ಕೇಂದ್ರ ಸ್ಥಾಪಿಸುವಂತೆ ಐಸಿಎಂಆರ್ ಮಾರ್ಗಸೂಚಿ ಹೊರಡಿಸಿದ್ದು ಅದರಂತೆ ಕ್ರಮಕ್ಕೆ ತೀರ್ಮಾನ
– ಏಪ್ರಿಲ್ ಅಂತ್ಯದೊಳಗೆ ಇನ್ನೂ 10 ಪ್ರಯೋಗಾಲಯಗಳನ್ನು ಸ್ಥಾಪಿಸಲು ಕ್ರಮ
– ಲಾಕ್ ಡೌನ್ ಸಡಿಲಗೊಳಿಸಿದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಅವುಗಳನ್ನು ನಿಭಾಯಿಸುವ ಸಿದ್ಧತೆ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನ
– ಲಾಕ್ ಡೌನ್ ಸಡಿಲಗೊಳಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕಾನರ್ ಮತ್ತಿತರ ಸರಳ ಪರೀಕ್ಷಾ ಪರಿಕರಗಳ ಮೂಲಕ ತಮ್ಮ ಸಿಬ್ಬಂದಿಯಲ್ಲಿ ರೋಗ ಲಕ್ಷಣವಿದೆಯೇ ಎಂದು ಪ್ರತಿ ದಿನ ಪರೀಕ್ಷೆ ಮಾಡುವ ಅಗತ್ಯವಿದೆ ಎಂದು ತಜ್ಞರ ಅಭಿಪ್ರಾಯ. ಈ ನಿಟ್ಟಿನಲ್ಲಿ ವಿವರವಾದ ಮಾರ್ಗಸೂಚಿ ಸಿದ್ಧಪಡಿಸಲು ತೀರ್ಮಾನ