Advertisement

ಅಧಿಕ ಪೌಷ್ಠಿಕಾಂಶವುಳ್ಳ ಸಿದ್ದು ಹಲಸು ವಾಣಿಜ್ಯ ಕೃಷಿಗೆ  ಸಹಕಾರಿ : ಸಿಎಂ ಬಿ.ಎಸ್.ಯಡಿಯೂರಪ್ಪ

06:20 PM Jun 28, 2021 | Team Udayavani |

ಬೆಂಗಳೂರು: ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.

Advertisement

ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸಿಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರಿಗೆ ಇಂದು  ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು,  ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ ತಳಿಯನ್ನು  ಗುರುತಿಸಲಾಗಿರುವುದು ಶ್ಲಾಘನೀಯ ಎಂದರು.

ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ  ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು  ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲಾ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದರು.

ಎಸ್.ಎಸ್ ಪರಮೇಶ್ ಅವರು ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ.

Advertisement

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ 31 ಸಾವಿರ  ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು.

ಶಿಕಾರಿಪುರದ ತಮ್ಮ ತೋಟದಲ್ಲಿ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಬೆಳೆಸಲು ಆಸಕ್ತಿ ತೋರಿದರು.

ಈ ಸಂದರ್ಭದಲ್ಲಿ ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ನಿರ್ದೇಶಕ  ಡಾ. ಬಿ.ಎನ್.ಎಸ್ ಮೂರ್ತಿ, ತುಮಕೂರಿನ   ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ಸಿ.ಹೆಚ್ .ಇ ಎಸ್ . ಮುಖ್ಯಸ್ಥ . ಜಿ.ಕರುಣಾಕರನ್,  ಹಾಗೂ ಸಿದ್ದು ಹಲಸು ಬೆಳೆದ ರೈತ  ಎಸ್.ಎಸ್.ಪರಮೇಶ್  ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next