Advertisement

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

10:35 AM Sep 08, 2019 | Mithun PG |

ಮೈಸೂರು: ವೈನಾಡಿನಲ್ಲಿ ಭಾರಿ ಮಳೆಯಿಂದಾಗಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ  ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದರು .

Advertisement

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನ ಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ  10:40 ರಿಂದ 11:40 ರ ಒಳಗೆ ಸಲ್ಲುವ  ವೃಶ್ಚಿಕ ಶುಭ ಲಗ್ನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದರು.

ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚು ಮಳೆ ಬಂದು ಅತಿವೃಷ್ಠಿ ಉಂಟಾಗಿದೆ. ತುಂಬಿರುವ ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ್ದೇನೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನೆರೆ ಪರಿಹಾರ ಸಂಬಂಧ ಅವರೊಂದಿಗೆ ಚರ್ಚಿಸುತ್ತೇನೆ. ಶ್ರೀಘ್ರದಲ್ಲೇ ಪರಿಹಾರ ಬಿಡುಗಡೆ ಆಗಲಿದೆ. ಬೀಚನಹಳ್ಳಿ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ  ಸಂಸದ ಶ್ರೀನಿವಾಸ್ ಪ್ರಸಾದ್,ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ,ಗೃಹ ಸಚಿವ ಬಸವರಾಜು ಬೊಮ್ಮಾಯಿ, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್, ಎಸ್ ಪಿ ರಿಷ್ಯಂತ್, ಜಿ.ಪಂ. ಸಿಇಓ  ಜ್ಯೋತಿ ಸೇರಿದಂತೆ ಇತರರು ಹಾಜರಿದ್ದರು .

Advertisement

Udayavani is now on Telegram. Click here to join our channel and stay updated with the latest news.

Next