Advertisement

ಹುತಾತ್ಮ ಅರಣ್ಯಾಧಿಕಾರಿಗಳ ಪರಿಹಾರ ಮೊತ್ತ ಹೆಚ್ಚಳ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ

09:18 AM Sep 12, 2019 | Mithun PG |

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ಕಾವಲುಗಾರ ಉಪ ವಲಯ ಅರಣ್ಯಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿಗಳು ಮರಣ ಹೊಂದಿದರೆ ಸರ್ಕಾರದಿಂದ ಅವರ ಕುಟುಂಬಕ್ಕೆ ನೀಡುವ 20 ಲಕ್ಷ ರೂಗಳ ಪರಿಹಾರವನ್ನು 30 ಲಕ್ಷಕ್ಕೆ ಏರಿಸಿ ಬುಧವಾರವೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ನಗರದ ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಹೂ ಗುಚ್ಛ ನಮನ ಸಲ್ಲಿಸಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿ ಕರ್ತವ್ಯದ ವೇಳೆ ಮರಣ ಹೊಂದಿದರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವ ಮಾದರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೂ 20 ಲಕ್ಷದ ಬದಲಿಗೆ 30 ಲಕ್ಷ ರೂ ನೀಡುವ ಸಂಬಂಧ ಬುಧವಾರವೇ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಆದೇಶ ಹೊರಡಿಸಲಾಗುತ್ತದೆ ಎಂದರು.

ದಿನಗೂಲಿ ನೌಕರರ ಸಮಸ್ಯೆಯನ್ನು ಪರಿಹರಿಸುವ ಸಂಭಂಧ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next