Advertisement

ಗುಜರಾತ್ ಮಾಜಿ ಸಿಎಂ ಕೇಶುಭಾಯಿ ಪಟೇಲ್ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

03:24 PM Oct 29, 2020 | keerthan |

ಬೆಂಗಳೂರು: ಗುಜರಾತಿನ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಎರಡು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು. ಸಮಾಜದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಶ್ರಮಿಸಿದ ಅವರ ನಿಧನದಿಂದ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಹಿರಿಯ ಮುಖಂಡ, ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಇನ್ನಿಲ್ಲ

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next