ಬೆಂಗಳೂರು: ಯಡಿಯೂರಪ್ಪ ಅವರಿಗೆ ಎರಡನೆ ಬಾರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಜ್ವರ ಕಾಣಿಸಿಕೊಂಡ ತಕ್ಷಣ ಅವರು ಮನೆಯಲ್ಲೇ ತಪಾಸಣೆಗೆ ಒಳಗಾಗಿದ್ದರು. ಬಳಿಕ ರಾಮಯ್ಯ ಆಸ್ಪತ್ರೆಗೆ ತೆರಳಿದ್ದರು. ಆದರೆ ಅಷ್ಟರಲ್ಲಾಗಲೇ ಕೋವಿಡ್ ಪಾಸಿಟಿವ್ ವರದಿ ಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
ಯಡಿಯೂರಪ್ಪ ಅವರು ಮೊದಲ ಹಂತದ ಕೋವಿಡ್ ಲಸಿಕೆ ಪಡೆದಿದ್ದಾರೆ. ಎರಡನೆ ಹಂತದ ಲಸಿಕೆ ಪಡೆಯಲು ಸಮಯಾವಕಾಶ ಇದ್ದಿದ್ದರಿಂದ ಇನ್ನೂ ಪಡೆದಿರಲಿಲ್ಲ. ಕೋವಿಡ್ ಲಸಿಕೆ ಪಡೆದಿದ್ದರಿಂದಾಗಿ ಅಷ್ಟಾಗಿ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜಗೆ ಕೋವಿಡ್ ಪಾಸಿಟಿವ್
ಜನರ ಆಶೀರ್ವಾದದಿಂದ ಯಡಿಯೂರಪ್ಪ ಅವರು ಶೀಘ್ರವೇ ಗುಣಮುಖರಾಗಲಿದ್ದಾರೆ. ವೈದ್ಯರ ಬಳಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಕರೋನಾ ಎದುರಿಸುವ ಶಕ್ತಿ ಇದೆ. ಇನ್ನು ಮೂರು ದಿನದಲ್ಲಿ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ: ಚುನಾವಣಾ ಕರ್ತವ್ಯದಲ್ಲಿದ್ದ ಎಎಸ್‌ಐ ಹೃದಯಾಘಾತದಿಂದ ಸಾವು