ಶಿವಮೊಗ್ಗ: 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನಡೆಸಿದರು.
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ವರ್ಚುವಲ್ ಅಗಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಿ ಶಂಕುಸ್ಥಾಪನೆ ನೆರವೇರಿಸಿದರು.
ಇದನ್ನೂ ಓದಿ:ಶಾಸಕ ಬಸನಗೌಡ ಯತ್ನಾಳ್ ಗೆ ಮತ್ತೆ ಪೊಲೀಸ್ ಭದ್ರತೆ ಆರಂಭ
ಬಳಿಕ ಮಾತನಾಡಿದ ಅವರು, 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಜಯಪುರ ವಿಮಾನ ನಿಲ್ದಾಣವನ್ನು ಎರಡು ಹಂತದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ. ಉಡಾನ್ ಯೋಜನೆಯಡಿ ವಿಮಾನ ಹಾರಾಟಕ್ಕೆ ಕ್ರಮವಹಿಸಲಾಗುತ್ತಿದೆ. ಏರ್ ಬಸ್ 320 ಹಾರಾಟಕ್ಕೆ ಅನುಕೂಲವಾಗುವಂತೆ ವಿಜಯಪುರ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಡಿಸಿ ಶಿವಕುಮಾರ್ ಸೇರಿದಂತೆ ಪ್ರಮುಖರು ಭಾಗಿಯಾದರು. ವಿಜಯಪುರದ ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಂಸದ ರಮೇಶ್ ಜಿಗಜಿಣಗಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.