ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಬರುತ್ತಿದ್ದಾರೆ. ಸಚಿವರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ನಾನು ಸಹ ಅವರ ಜೊತೆಯಲ್ಲಿದ್ದು ಸಹಕಾರ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು.
ಇದನ್ನೂ ಓದಿ:ಯುಡಿಯೂರಪ್ಪ ‘ಸಿಎಂ’ ಸ್ಥಾನ ಯೋಗ್ಯ- ಅಯೋಗ್ಯತೆ ಮೇಲೆ ನಿರ್ಧಾರವಾಗಲಿ: ಸಿದ್ದಲಿಂಗ ಮಹಾಸ್ವಾಮಿ
ವಾರದಲ್ಲಿ ಒಮ್ಮೆಯಾದರೂ ಜಿಲ್ಲೆಗಳಿಗೆ ತೆರಳಿ ಅಭಿವೃದ್ಧಿ ಕಾರ್ಯ ಪರಿಶೀಲನೆ ನಡೆಸುತ್ತೇನೆ. ಜಿಲ್ಲೆಗಳ ವಾಸ್ತವ ಸ್ಥಿತಿ ತಿಳಿಯಲು ಅವಕಾಶವಾಗುತ್ತದೆ. ಹಾಸನದಲ್ಲಿ ಏರ್ ಪೋರ್ಟ್ ಕೆಲಸ ನಡೆಯುತ್ತಿದೆ. ಆದಷ್ಟು ಬೇಗ ದೇವೇಗೌಡರ ಜೊತೆ ಶಂಕುಸ್ಥಾಪನೆ ಕಾರ್ಯ, ಅಭಿವೃದ್ಧಿ ಕಾರ್ಯ ಕೂಡ ಮಾಡಲಾಗುವುದು ಎಂದರು.
ಅನ್ ಲಾಕ್ ಬಳಿಕ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಳವಾಗುವ ವಿಚಾರವಾಗಿ ಮಾತನಾಡಿದ ಅವರು, ನಾನು ಅಧಿಕಾರಿಗಳ ಜೊತೆ ಮಾತಾನಾಡುತ್ತೇನೆ. ಬೆಂಗಳೂರಿಗೆ ಬರುವವರಿಗೆ ಕಠಿಣ ಪರೀಕ್ಷೆ ಮಾಡಲು ಸೂಚಿಸುತ್ತೇನೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ದಿಗ್ವಿಜಯ ಸಿಂಗ್ ಆರ್ಟಿಕಲ್ 370 ಮರು ಪರಿಶೀಲನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತಿರುಕನ ಕನಸು ಕಾಣುವವರಿಗೆ ನಾನು ಏನೂ ಹೇಳುವುದಿಲ್ಲ. ಅವರ ನಾಯಕತ್ವದ ಕೊರತೆಯಿಂದ ಪಕ್ಷ ಎಲ್ಲಿದೆ ಎಂದು ಗೊತ್ತಿದೆ. ಕಾಂಗ್ರೆಸ್ ಪರಿಸ್ಥಿತಿ ಹೇಗಿದೆ ಎಂದು ಎಲ್ಲರೂ ಗಮನಿಸಿದ್ದಾರೆ ಎಂದರು