ಬೆಂಗಳೂರು: ಸಿ.ಪಿ ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಯೋಗೇಶ್ವರ್ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ ಎಂದು ಸುಳಿವು ನೀಡಿದ್ದಾರೆ.
ಆ ಮೂಲಕ ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಚುರುಕುಗೊಂಡಿರುವ ಬೆನ್ನಲ್ಲೇ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಅವರು ಸಚಿವ ಸಂಪುಟ ಸೇರುವುದು ಖಚಿತವಾಗಿದೆ.
ಇದನ್ನೂ ಓದಿ: ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ
ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಬಹಿರಂಗ ಹೇಳಿಕೆಯನ್ನು ನೀಡಿದ್ದರು. “ನಮ್ಮ ಸರಕಾರ ಅಧಿಕಾರಕ್ಕೆ ಬರುವಲ್ಲಿ, ಯೋಗೇಶ್ವರ್ ಅವರ ಕೊಡುಗೆ ಅಪಾರ. ಹಾಗಾಗಿ, ಅವರಿಗೆ ಸಚಿವ ಸ್ಥಾನ ಸಿಗಬೇಕು ಎನ್ನುವುದು ನನ್ನ ನಿಲುವು ಕೂಡಾ”ಎಂದು ತಿಳಿಸಿದ್ದರು.
ಇದನ್ನೂ ಓದಿ: ಜಿದ್ದಾಜಿದ್ದಿನ ಅಖಾಡ: ಹೈದರಾಬಾದ್ ಪಾಲಿಕೆ ಚುನಾವಣೆ -ಈ ಬಾರಿ ಯಾರಿಗೆ ಅಧಿಕಾರ?