Advertisement

ಐಟಿ ಅಧಿಕಾರಿಗಳ ವಿರುದ್ಧ ಸಿಎಂ ಮತ್ತೆ ಗರಂ

11:30 AM Mar 31, 2019 | Lakshmi GovindaRaju |

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

Advertisement

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ ಎಂದು ಆರೋಪಿಸಿದರು.

ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಬಾಡಿಗೆ ಪಡೆದು ಮೈಸೂರಿನಲ್ಲಿ ಸಿಎಫ್ಟಿಆರ್‌ಐನಲ್ಲಿ ತಂಗಿರುವ ಅವರು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರಗಳನ್ನು ಹಣೆದಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರಗಳನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next