Advertisement

ಪತ್ರಕರ್ತರ ಅಕಾಲಿಕ ನಿಧನ ; ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

08:57 AM Mar 01, 2020 | Suhan S |

ಬೆಂಗಳೂರು : ಅಕಾಲಿಕ ನಿಧನ ಹೊಂದಿದ್ದ ನಾಲ್ವರು ಪತ್ರಕರ್ತರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ  ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

Advertisement

ಪತ್ರಕರ್ತರ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿತ್ತು. ಪತ್ರಕರ್ತರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರದಂದು ಈ ಪರಿಹಾರ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ನಿಧನ ಹೊಂದಿದ್ದ ಪತ್ರಕರ್ತರಾದ ಗಜಾನನ ಹೆಗಡೆ, ಬಿ ಆರ್ ರೋಹಿತ್, ರವಿರಾಜ ವಳಲಂಬೆ, ದಿಗಂಬರ ಗರುಡಾ ಇವರ ಕುಟುಂಬಕ್ಕೆ  ತಲಾ 5 ಲಕ್ಷ ರೂ. ಸಿಎಂ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ.

ಪತ್ರಕರ್ತರ ಅಕಾಲಿಕ ನಿಧನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಮುಖ್ಯಮಂತ್ರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಪತ್ರಕರ್ತರ ಈ ನಿಯೋಗದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿರುವ ಹಿರಿಯ ಪತ್ರಕರ್ತ ಕೆ. ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಹೆಚ್.ಎ. ಕಿರಣ್ ಸಹಿತ ಹಲವರು ಹಾಜರಿದ್ದರು.

 

Advertisement

Advertisement

Udayavani is now on Telegram. Click here to join our channel and stay updated with the latest news.

Next