ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅವರೇ ನಿರ್ಧಾರ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಸೋಮವಾರ ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕ್ರಮ ಕೂಡ ಇದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು, ಆ ಬಗ್ಗೆ ಅವರೇ ನಿರ್ಧಾರ ಮಾಡಲಿದ್ದಾರೆ ಎಂದರು.
ಸದ್ಯ ರಾಜ್ಯ ಬಿಜೆಪಿಯಲ್ಲಿ ಯಾವ ಬದಲಾವಣೆಗಳು ಸಂಭವಿಸುತ್ತದೆ, ಸಚಿವ ಸಂಪುಟದ ವಿಚಾರದಲ್ಲ್ ಷಾ ಅವರು ಯಾವ ಸೂಚನೆ ಗಳನ್ನೂ ನೀಡುತ್ತಾರೆ ಎನ್ನುವ ಕುತೂಹಲ ಮನೆ ಮಾಡಿದೆ.