Advertisement

ನಾಯಕತ್ವ ಬದಲಾವಣೆಯಿಲ್ಲ, ದೆಹಲಿ ಭೇಟಿಗೆ ವಿಶೇಷ ಅರ್ಥ ಬೇಡ: ಭೈರತಿ ಬಸವರಾಜ್

02:52 PM Jul 18, 2021 | Team Udayavani |

ದಾವಣಗೆರೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು  ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದಯವರಿಯಲಿದ್ದಾರೆ. ಅವರ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದರು

ಪಕ್ಷದ ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಹಾಗೆಂದ ಮಾತ್ರಕ್ಕೆ ಬದಲಾವಣೆ ಮಾಡಲಾಗುತ್ತದೆ ಎಂಬುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾಧ್ಯಮಗಳಲ್ಲಿ ಚರ್ಚೆಯಾದ ಮಾತ್ರಕ್ಕೆ ನಿಖರ ಅಲ್ಲ. ಯಡಿಯೂರಪ್ಪ ಅವರು ಖಚಿತವಾಗಿ ವಿಸ್ತರಣೆಯಾಗಲೀ, ಪುನಾರಚನೆ ಬಗ್ಗೆ ಆಗಲಿ ಎಲ್ಲಿಯೂ ಹೇಳಿಲ್ಲ. ಮಾಧ್ಯಮದಲ್ಲಿ ಚರ್ಚೆ ಆದಾಕ್ಷಣ ವಿಸ್ತರಣೆ ಆಗಿಬಿಡುತ್ತಾ‌? ಸಿಎಂ ಹೇಳಿದ್ರೆ ಮಾತ್ರ ಅದಕ್ಕೆ ಪುಷ್ಟಿ ಬರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಚಿತ್ರರಂಗದ ವಿಚಾರ ಬೀದಿ ಚರ್ಚೆಗೆ ವಿಷಯವಾಗುವಂತೆ ಮಾಡಬೇಡಿ : ಮಾಧ್ಯಮಗಳಿಗೆ ಜಗ್ಗೇಶ ಮನವಿ

Advertisement

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲ. ದೆಹಲಿಗೆ ಯಾರು ಹೋಗಿ ಬರುತ್ತಿದ್ದಾರೆ. ನನ್ನ ಇಲಾಖೆಗೆ ಸಂಬಂಧಿಸಿದಂತೆ ಕೆಲಸ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡುತ್ತೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ನಾನು ಮನೆ ಬಿಟ್ಟು ನಾಲ್ಕೈದು ದಿನ ಆಯ್ತು. ಜಿಲ್ಲಾ ಪ್ರವಾಸದಲ್ಲಿದ್ದೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತಿದ್ದೇವೆ. ಅಭಿವೃದ್ಧಿಗೆ ವೇಗ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು  ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next