Advertisement
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಡೀ ದೇಶದ ಆತ್ಮಸಾಕ್ಷಿಯನ್ನೇ ಕಲಕುವಂಥ ಘೋರ ಹಾಗೂ ಅಸಹ್ಯಕರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿದ್ದು ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಎಸ್‌ಐಟಿಯನ್ನು ರಚಿಸಿದೆ. ಪೊಲೀಸರು ಈಗಾಗಲೇ ತನಿಖೆ ಪ್ರಾರಂಭಿಸಿದ್ದು ಎ. 28ರಂದೇ ಸಂತ್ರಸ್ತೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಆರೋಪಿ ಪ್ರಜ್ವಲ್ ರೇವಣ್ಣ ತಮ್ಮ ಡಿಪ್ಲೋಮ್ಯಾಟಿಕ್ ಪಾಸ್‌ಪೋರ್ಟ್ ಬಳಸಿಕೊಂಡು ಎ. 27ರಂದೇ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದು ಅವರನ್ನು ಬಂಧಿಸಲು ಸಹಕರಿಸಬೇಕು ಎಂದು ಆಗ್ರಹಿಸಿದ್ದಾರೆ.
Related Articles
ಯಾದಗಿರಿ, ಹಾಸನ ಸಂಸದ ಪ್ರಜ್ವಲ್‌ಗೆ ವಿದೇಶಕ್ಕೆ ಹೋಗಲು ಒಂದೇ ದಿನದಲ್ಲಿ ವೀಸಾ ಕೊಟ್ಟವರು ಯಾರು? ಇದೆಲ್ಲವನ್ನೂ ದೇವೇಗೌಡರೇ ಪ್ಲ್ಯಾನ್ ಮಾಡಿ ಮಾಡಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುರಪುರ ತಾಲೂಕು ದೇವತ್ಕಲ್ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣವನ್ನು ಈಗಾಗಲೇ ಎಸ್‌ಐಟಿಗೆ ವಹಿಸಲಾಗಿದೆ. ಯಾವುದೇ ಕಾರಣಕ್ಕೂ ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಪಾರದರ್ಶಕ ತನಿಖೆಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಪ್ರಜ್ವಲ್ ವಿದೇಶಕ್ಕೆ ಹೋಗಲು ಬಿಟ್ಟವರು ಯಾರು, ಇದರ ಹಿಂದೆ ಯಾರಿದ್ದಾರೆ ಎಲ್ಲವನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಮಾಜಿ ಪ್ರಧಾನಿ ದೇವೇಗೌಡರ ಕಣ್ಣಿಗೆ ಇದೆಲ್ಲವೂ ಕಾಣಲಿಲ್ಲವಾ? ಪ್ರಜ್ವಲ್ ವಿದೇಶಕ್ಕೆ ಹೋಗುವಾಗ ಯಾರ ಧೈರ್ಯದಿಂದ ಹೋದ, ಪಾಸ್‌ಪೋರ್ಟ್, ವೀಸಾ ಕೊಟ್ಟವರು ಯಾರು? ಇದೆಲ್ಲವನ್ನೂ ಪ್ಲ್ಯಾನ್ ಮಾಡಿದವರು ದೇವೇಗೌಡರೇ ಎಂದರು.
Advertisement