ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರ ಸಂಘ ಹಾಗೂ ಕೋ ಆಪರೇಟಿವ್ ಸೊಸೈಟಿಗಳಿಗೆ ಅಕ್ರಮವಾಗಿ ಬಿಬಿಎಂಪಿಯಿಂದ ಕೋಟ್ಯಂತರ ರೂ. ವರ್ಗಾವಣೆಯಾಗಿದೆ.
ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ಈ ಮಧ್ಯೆ ಇಡೀ ಪ್ರಕರಣದ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳ ಕಚೇರಿಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರ ಸಂಘ ಹಾಗೂ ಕೋ ಆಪರೇಟಿವ್ ಸೊಸೈಟಿಗಳಿಗೆ ಅಕ್ರಮವಾಗಿ ಬಿಬಿಎಂಪಿಯಿಂದ ಕೋಟ್ಯಂತರ ರೂ.ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕಚೇರಿ ಮಧ್ಯಪ್ರವೇಶ ಮಾಡಿ ಕಚೇರಿಗೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದೆ.
ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಎಚ್ಚೆತ್ತು ಕೊಂಡಿ ರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿ ದಂತೆ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿಯ ಹಣಕಾಸು, ಸಮಾಜ ಕಲ್ಯಾಣ ವಿಭಾಗದ ಅಧಿಕಾರಿಗಳು ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ಆರಂಭಿಸಿದ್ದಾರೆ. ಪಶ್ಚಿಮ ವಲಯದ ಜಂಟಿ ಆಯುಕ್ತರೊಂದಿಗೆ ಶನಿವಾರ ಚರ್ಚೆ ನಡೆಸಿರುವ ವಿಶೇಷ ಆಯುಕ್ತರು ಸೋಮವಾರ ಸಂಪೂರ್ಣ ಮಾಹಿತಿಯೊಂದಿಗೆ ವರದಿ ನೀಡುವುದಕ್ಕೆ ಗಡುವು ನೀಡಿದ್ದಾರೆ.
ಕೋವಿಡ್ ವೇಳೆ ಕೋಟ್ಯಂತರ ರೂ.ಅಕ್ರಮ ವರ್ಗಾವಣೆ: ಕೋವಿಡ್ ಸಮಯದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಅಕ್ರಮವಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಸದ್ಯ ಅಕ್ರಮ ಹಣ ವರ್ಗಾವಣೆ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದೆ. ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಈ ಬಹುಕೋಟಿ ಹಗರಣ ನಡೆದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.
ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಲಾಗಿದ್ದು, ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಹಣ ದುರ್ಬಳಕೆ ಮಾಡಿರೋದು ಬಯಲಾಗಿದೆ.