ಯಾವುದೇ ವಾಗ್ವಾದ ನಡೆದಿಲ್ಲ. ಯಾವ ಸಚಿವರೂ ರಾಜೀನಾಮೆ ನೀಡುವ ಬೆದರಿಕೆ ಹಾಕಿಲ್ಲವೆಂದು ಲಿಂಗಾಯತ ಪ್ರತ್ಯೇಕ ಧರ್ಮ
ಹೋರಾಟದ ನಾಯಕತ್ವ ವಹಿಸಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
Advertisement
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದಿದ್ದರೆ, ನಾನೂ ಸೇರಿ ಡಾ.ಶರಣ ಪ್ರಕಾಶ್ ಪಾಟೀಲ್, ಬಸವರಾಜ ರಾಯರಡ್ಡಿ, ವಿನಯ್ ಕುಲಕರ್ಣಿರಾಜೀನಾಮೆ ನೀಡುವ ಬೆದರಿಕೆ ಹಾಕಿಲ್ಲ. ಈಶ್ವರ್ ಖಂಡ್ರೆ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಕೂಡಾ ರಾಜೀನಾಮೆ ಬೆದರಿಕೆ
ಹಾಕಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ತಪ್ಪಾಗಿ ವರದಿ ಪ್ರಕಟವಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯದಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆಂದು ಎಂ.ಬಿ.ಪಾಟೀಲ್
ತಿಳಿಸಿದ್ದಾರೆ.
● ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.