Advertisement

ವಿರಕ್ತಮಠ, ಶಿವಾನಂದಪ್ಪಗೆ ‘ಸಿಎನ್ಆರ್ ರಾವ್ ಜೀವಮಾನ ಸಾಧನೆ’ಪ್ರಶಸ್ತಿ

02:36 PM Aug 02, 2022 | Team Udayavani |

ಬೆಂಗಳೂರು: ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಡಾ.ಸಿ.ಎ.ವಿರಕ್ತ ಮಠ ಮತ್ತು ಡಾ. ಬಿ ಶಿವಾನಂದಪ್ಪ ಅವರಿಗೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2012ನೇ ಸಾಲಿನ ಸಿ.ಎನ್.ಆರ್. ರಾವ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಂಗಳವಾರ ಇಲ್ಲಿ ಪ್ರದಾನ ಮಾಡಲಾಯಿತು.

Advertisement

ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮಂಗಳವಾರ ಆಯೋಜಿಸಿದ್ದ ಸಮಾರಂಭದಲ್ಲಿ ತಜ್ಞರಿಗೆ ಅಕಾಡೆಮಿ ಪ್ರಶಸ್ತಿ ಹಾಗೂ ಫೆಲೋಶಿಪ್ ಗಳನ್ನು ಐಟಿ- ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ಅವರು ಮಂಗಳವಾರ ಪ್ರದಾನ‌ ಮಾಡಿದರು.

ಪ್ರೊ.ಕೆ.ವಿ ರಾವ್ ಮತ್ತು ಡಾ. ನಾ ಸೋಮೇಶ್ವರ ಅವರಿಗೆ ಅಕಾಡೆಮಿ ವತಿಯಿಂದ ವಿಜ್ಞಾನ ಸಂವಹನೆಗಾಗಿ ಕೊಡ ಮಾಡುವ ಜೀವಮಾನ ಪುರಸ್ಕಾರಗಳನ್ನೂ ಕೊಡಲಾಯಿತು.

ನಂತರ ಮಾತನಾಡಿದ ಸಚಿವರು ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ತೊಡಗಿಕೊಂಡಿರುವವರು ಸಮಾಜದ ವಾಸ್ತವ ಪರಿಸ್ಥಿತಿಗಳನ್ನು ಆಧರಿಸಿ ಸಂಶೋಧನೆ ಮಾಡಿದರೆ ಅದರಿಂದ ಸಮುದಾಯಗಳ ಸಬಲೀಕರಣ ಸುಗಮವಾಗುತ್ತದೆ ಎಂದು ಅಭಿಪ್ರಾಯಪಟ್ಟರು

ಕರ್ನಾಟಕ ರಾಜ್ಯವು ಸಂಶೋಧನೆ ಮತ್ತು ನಾವಿನ್ಯತೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಇದನ್ನು ಬೇರೆ ರಾಜ್ಯಗಳಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಸಂಶೋಧನೆ ಮತ್ತು ನಾವಿನ್ಯತೆಗೆ ಸರ್ಕಾರವು ಸಾಕಷ್ಟು ಉತ್ತೇಜನ ಕೊಡುತ್ತಿದೆ ಎಂದು ಅವರು ಹೇಳಿದರು.

Advertisement

ಇದನ್ನೂ ಓದಿ:ಸಿದ್ದರಾಮೋತ್ಸವಕ್ಕೆ ಬಾದಾಮಿ ತಾಲೂಕಿನಿಂದ 25 ಸಾವಿರ ಕಾರ್ಯಕರ್ತರು ಭಾಗಿ: ಹೊಳಬಸು ಶೆಟ್ಟರ

ರಾಜ್ಯವು ನವೋದ್ಯಮ ವಲಯದಲ್ಲೂ ಕೂಡ ಭಾರತಕ್ಕೆ ನಂಬರ್ ಒನ್ ಆಗಿದ್ದು ಈ ಸ್ಥಾನವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು. ಇದಕ್ಕಾಗಿ ಸರ್ಕಾರವು ವಿಜ್ಞಾನಿಗಳ ತಂತ್ರಜ್ಞಾನಿಗಳ ಮತ್ತು ಹೂಡಿಕೆದಾರರ ಸಹಕಾರವನ್ನು ಬಯಸುತ್ತದೆ ಎಂದು ಅವರು ಆಶಿಸಿದರು

ಪ್ರಯೋಗಾಲಯಗಳಲ್ಲಿ ಸಿದ್ಧವಾಗುವ ವಿಜ್ಞಾನದ ಫಲಿತಗಳು ತಂತ್ರಜ್ಞಾನದ ಮೂಲಕ ಜನರನ್ನು ತಲುಪುತ್ತವೆ. ಇವು ಸಮುದಾಯಗಳ ಕೈಗೆ ಅಂತಿದ್ದರೆ ಕೆಟಕುವಂತೆ ಇದ್ದರೆ ಮಾತ್ರ ಸಂಶೋಧನೆಗಳಿಗೆ ಬೆಲೆ ಬರುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ಡಾ. ಎಸ್ ಅಯ್ಯಪ್ಪನ್, ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಡಾ. ಎ ಕೆ ಸೂದ್, ವಿಜ್ಞಾನ ಮತ್ತು ತಂತ್ರಜ್ಞಾನ ಸೊಸೈಟಿ ನಿರ್ದೇಶಕ ಕೆ ಬಿ ಬಸವರಾಜು ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next