Advertisement

ಭ್ರಷ್ಟಾಚಾರ ಆರೋಪ:ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

04:03 PM Sep 24, 2020 | keerthan |

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿದೆ.

Advertisement

ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರದ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಿದೆ.

ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಬಿಎಸ್ ವೈ ಪುತ್ರ, ಮೊಮ್ಮಗ, ಹಾಗೂ ಅಳಿಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯಸರ್ಕಾರದ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಎಂದರು.

ಇದನ್ನೂ ಓದಿ: ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಇಂದಿನ ಕಲಾಪದಲ್ಲಿ ಈ ಬಗ್ಗೆ ಕಾಂಗ್ರೆಸ್ ಪ್ರಸ್ತಾವಿಸಲಿದೆ. ಪ್ರಸ್ತಾವನೆಗೆ ಸ್ಪೀಕರ್ ಒಪ್ಪಿದರೆ ವಿಷಯದ ಕುರಿತು ಕಲಾಪದಲ್ಲಿ ಚರ್ಚೆ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next