Advertisement

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

08:46 PM Oct 21, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ₹200 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ ಮತ್ತು 2025ರ ವೇಳೆಗೆ 10,000 ಪೊಲೀಸ್ ವಸತಿ ಮನೆಗಳ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಘೋಷಿಸಿದ್ದಾರೆ.

Advertisement

ಪೊಲೀಸ್ ಸಂಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕರ್ತವ್ಯದ ವೇಳೆ ಹುತಾತ್ಮರಾದ ಕರ್ನಾಟಕದ 12 ಮಂದಿ ಸೇರಿ ದೇಶದಲ್ಲಿ 216 ಮಂದಿ ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳ ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು. ದೇಶದ, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ಪ್ರಾಣ, ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದರು.

7 ಪಬ್ಲಿಕ್ ಶಾಲೆಗಳ ತೆರೆಯಲು ನಿರ್ಧಾರ:
ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ಧವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು, ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು. ಸಮಾಜದಲ್ಲಿ ಶಾಂತಿ ಕಾಪಾಡಲು ಕಾನೂನು ಮತ್ತು ಸುವ್ಯವಸ್ಥೆಯ ಮಹತ್ವವನ್ನು ಒತ್ತಿ ಹೇಳಿದ ಸಿದ್ದರಾಮಯ್ಯ, ಶಾಂತಿಯುತ ಸಮಾಜವು ಹೂಡಿಕೆಯ ಆಕರ್ಷಿಸುತ್ತದೆ, ಹೆಚ್ಚಿನ ಉದ್ಯೋಗಾವಕಾಶಗಳ ಸೃಷ್ಟಿಸುತ್ತದೆ, ತಲಾ ಆದಾಯ ಹೆಚ್ಚಿಸುತ್ತದೆ ಮತ್ತು ಆರ್ಥಿಕತೆ ಸುಧಾರಿಸುತ್ತದೆ. ಪೊಲೀಸರಿಗೆ ಮನೆ ನೀಡುವುದು ಸರ್ಕಾರದ ಕರ್ತವ್ಯ. ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳ ತೆರೆಯಲು ನಿರ್ಧರಿಸಿದ್ದೇವೆ. ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂತಹ ಶಾಲೆಗಳ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.


ಶೀಘ್ರದಲ್ಲೇ ಕಾವೇರಿ 6ನೇ ಹಂತದ ಯೋಜನೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ
ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಅಪಘಾತಗಳ ಸಂದರ್ಭದಲ್ಲಿ ತ್ವರಿತ ಪ್ರತಿಕ್ರಿಯೆಗಾಗಿ, 200 ವಾಹನಗಳು ಹೆದ್ದಾರಿಗಳಲ್ಲಿ ಗಸ್ತು ತಿರುಗುತ್ತಿವೆ ಮತ್ತು ಸಾರ್ವಜನಿಕ ಸ್ಥಳಗಳ ನಿಗಾವಣೆಗಾಗಿ 6,000 ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರಿಗೆ ಕರ್ತವ್ಯ ನಿರ್ವಹಿಸಲು ರಾಜ್ಯ ಸರ್ಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next