Advertisement

ಅಧಿಕಾರಕ್ಕೆ ಬಂದ ತಕ್ಷಣ ಸಹಕಾರಿ, ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ

06:50 AM Apr 30, 2018 | |

ಕಲಬುರಗಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಬೆಳೆ ಸಾಲಮನ್ನಾ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಕಲಬುರಗಿ ದಕ್ಷಿಣ, ಉತ್ತರ, ಗ್ರಾಮೀಣದಲ್ಲಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಲಮನ್ನಾದ ಅಂಶಗಳು ಪಕ್ಷದ ಪ್ರಣಾಳಿಕೆಯಲ್ಲಿ ಇರಲಿವೆ. ಏ.30ರಂದೇ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಇನ್ನೆರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 17 ಅಥವಾ 18ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದರು.

“ನಾನು ಮುಖ್ಯಮಂತ್ರಿ ಆಗೋದಿಲ್ಲ ಎಂದು ಹೇಳುವ ಸಿದ್ದರಾಮಯ್ಯ ತಲೆತಿರುಕ. ಚುನಾವಣೆಗೆ ನಿಂತಿರುವ ಎರಡೂ ಕ್ಷೇತ್ರಗಳಲ್ಲೂ ಅವರು ಸೋಲುತ್ತಾರೆ. ಮೊದಲು ತಮ್ಮ ಜಿಲ್ಲೆಯಲ್ಲಿ ಗೆದ್ದು ತೋರಿಸಲಿ. ನಾನು ಶಿಕಾರಿಪುರಕ್ಕೆ ಒಮ್ಮೆಯೂ ಪ್ರಚಾರಕ್ಕೆ ಹೋಗಿಲ್ಲ. ಆದರೆ, ಸಿದ್ದರಾಮಯ್ಯ ಚಾಮುಂಡಿ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಜನಾರ್ದನ ರೆಡ್ಡಿಗೂ ಪಕ್ಷಕ್ಕೂ ಸಂಬಂಧವಿಲ್ಲ. ಅವರು ತಮ್ಮ ಗೆಳೆಯನ ಪರ ಪ್ರಚಾರ ಮಾಡುತ್ತಿದ್ದಾರೆ ಅಷ್ಟೆ. ಶ್ರೀರಾಮುಲು ಉಪ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next