Advertisement

ಜಿಲ್ಲೆಯ ಪ್ರಗತಿಗೆ ಸಹಕಾರ; ಸಿಎಂ

02:14 PM Jun 09, 2020 | mahesh |

ಬಳ್ಳಾರಿ: ಗಣಿನಾಡು ಬಳ್ಳಾರಿಯ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬುಡಾ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸಿಎಂ ಬಿ.ಎಸ್‌.ಯಡಿಯೂರಪ್ಪರನ್ನು ಈಚೆಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಸನ್ಮಾನಿಸಲಾಯಿತು. ಈ ವೇಳೆ ಸನ್ಮಾನ ಸ್ವೀಕರಿಸಿ, ಆಶೀರ್ವಾದಿಸಿದ ಸಿಎಂ ಯಡಿಯೂರಪ್ಪನವರು, ಬಳ್ಳಾಗಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಅಲ್ಲದೇ, ಇದೇ ವೇಳೆ ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಅಗತ್ಯ ಮಾಹಿತಿ ಪಡೆದುಕೊಂಡರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next