Advertisement
72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹದೇವಪುರದ ಕಾಡುಗುಡಿ ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣದ ಬಳಿಕ ಮಾತನಾಡಿ, ಸಿಲಿಕಾನ್ ಸಿಟಿಯಲ್ಲಿ ಅನ್ಯ ರಾಜ್ಯಗಳ ಹೆಸರಿನಲ್ಲಿ ಬಾಂಗ್ಲ ಮತ್ತು ಆಫ್ರಿಕಾ ದೇಶಿಗರು ಅಕ್ರಮವಾಗಿ ನೆಲೆಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದು ರಾಜ್ಯ ಜನತೆಗೂ ತೊಂದರೆ, ರಾಜ್ಯಕ್ಕೂ ಅಪಖ್ಯಾತಿ ಎಂದರು.
Related Articles
Advertisement
ಗಡೀಪಾರು ಕೇಂದ್ರ ಆರಂಭಿಸಲು ಕೇಂದ್ರಕ್ಕೆ ಮನವಿ: ನಗರದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ವಿದೇಶಿ ಪ್ರಜೆಗಳನ್ನು ಗಡೀಪಾರು ಮಾಡುವ ಸಂಬಂಧ ಬೆಂಗಳೂರಿನಲ್ಲಿ ಗಡೀಪಾರು ಕೇಂದ್ರ ಆರಂಭಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಅರವಿಂದ ಲಿಂಬಾವಳಿ ಮತ್ತು ಸಂಸದ ಪಿ.ಸಿ.ಮೋಹನ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಭಾನುವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜುಜು ಅವರನ್ನು ಭೇಟಿ ಮಾಡಿದ ಅರಂವಿಂದ ಲಿಂಬಾವಳಿ ಮತ್ತು ಪಿ.ಸಿ.ಮೋಹನ್, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಕ್ರಮ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳುಹಿಸಲು ಗಡೀಪಾರು ಕೇಂದ್ರ ಸ್ಥಾಪಿಸುವ ಸಂಬಂಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ವಿದೇಶಾಂಗ ಕಾಯ್ದೆಯನ್ವಯ ಈ ರೀತಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪತ್ತೆಹಚ್ಚಿ ಅವರನ್ನು ಗಡೀಪಾರು ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.